ಮಂಗಳೂರು

ಮಂಗಳೂರು: ಹೊರಗುತ್ತಿಗೆ ನೌಕರರ ಪ್ರತಿಭಟನೆ, ಸಾರ್ವಜನಿಕರು ಸಹಕಾರ ನೀಡುವಂತೆ ಮೇಯರ್ ಮನವಿ

ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆಯಿಂದಾಗಿ ನಗರದಲ್ಲಿ ಉಂಟಾಗಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲು ಸಾರ್ವಜನಿಕರು ಮಹಾನಗರ ಪಾಲಿಕೆಗೆ ಸಹಕಾರ ನೀಡುವಂತೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಮನವಿ ಮಾಡಿದ್ದಾರೆ.

ತಮ್ಮ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಳೆದ 10 ದಿನಗಳಿಂದ ನಗರದಲ್ಲಿ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಹದಗೆಟ್ಟಿದೆ. ಇಷ್ಟರ ತನಕ ತೊಂದರೆಯನ್ನು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಜನರು ಸಹಿಸಿಕೊಂಡಿದ್ದಾರೆ. ಇದೀಗ ಖಾಯಂ ಪೌರ ಕಾರ್ಮಿಕರನ್ನು ಬಳಸಿಕೊಂಡು ಸಮಸ್ಯೆಯ ಪರಿಹಾರಕ್ಕೆ ಪ್ರಯತ್ನ ನಡೆಸಲಾಗಿದೆ. ಸಾರ್ವಜನಿಕರು ಸಮಸ್ಯೆ ಪರಿಹಾರಕ್ಕೆ ಪಾಲಿಕೆಯೊಂದಿಗೆ ಕೈಜೋಡಿಸುವಂತೆ ವಿನಂತಿಸಿದರು.

ಪ್ರತಿಭಟನೆನಿರತ ಸಿಬ್ಬಂದಿಯ ಮನವೊಲಿಸಲು ಪ್ರಯತ್ನ ಮುಂದುವರಿದಿದೆ. ರಾಜ್ಯಾದ್ಯಂತ ಈ ಸಮಸ್ಯೆ ಇರುವುದರಿಂದ ಸರಕಾರವೇ ಅವರ ಬೇಡಿಕೆಗಳನ್ನು ಈಡೇರಿಸಲು ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಹೇಳಿದರು.

ನಗರದಲ್ಲಿ ನಾಲ್ಕು ಎಸ್‌ಟಿಪಿಗಳು ಹಾಗೂ 22 ವೆಲ್‌ವೆಟ್‌ಗಳನ್ನು ನಿರ್ಮಿಸಲಾಗಿದೆ ಹಾಗೂ ಒಳಚರಂಡಿ ಸಂಪರ್ಕ ದೈನಂದಿನ ನಿರ್ವಹಣೆಗಾಗಿ ಪಾಲಿಕೆಯ ವಾಹನಗಳನ್ನು ಇ- ಟೆಂಡರ್ ಮೂಲಕ ಟೆಂಡರ್‌, ಮೂಲಕ ಗುತ್ತಿಗೆ ನೀಡಲಾಗಿದೆ.ಗುತ್ತಿಗೆದಾರರು ನಗರಪಾಲಿಕ ವಾಹನಗಳನ್ನು ಉಪಯೋಗಿಸಿಕೊಂಡು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಒಳಚರಂಡಿ ವಿಭಾಗದಲ್ಲಿನ ಒಳಚರಂಡಿ ಜಾಲ ಹಾಗೂ ಮ್ಯಾನ್‌ಹೋಲ್
ನಿರ್ವಹಣೆಯನ್ನು ನಿರ್ವಹಿಸುವುದು ಗುತ್ತಿಗೆದಾರರ ಜವಾಬ್ದಾರಿಯಾಗಿರುತ್ತದೆ. ಆದರೆ ಅವರು ವಿಫಲರಾಗಿದ್ದಾರೆ ಎಂದರು.

ಒಳಚರಂಡಿ ವೆಟ್‌ವೆಲ್‌ಗಳಲ್ಲಿ ಬರುವ ನೀರನ್ನು ಉಪಯೋಗಿಸಿಕೊಳ್ಳುವ ಸಲುವಾಗಿ 14 ವೆಟ್‌ವೆಲ್‌ಗಳನ್ನು ಹಾಗೂ ಕಾವೂರು ದ್ರವ್ಯ ತ್ಯಾಜ್ಯ ಘಟಕಗಳ ಸಂಪೂರ್ಣ ನಿರ್ವಹಣೆ ಹಾಗೂ ಚಾಲನೆಗಾಗಿ ಎಮ್‌ಎಸ್‌ಇಜೆಡ್ ನೊಂದಿಗೆ ಒಪ್ಪಂದ ಮಾಡಿಕೊಂಡು ಎಮ್‌ಎಸ್‌ಇಝಡ್‌ಗೆ ವಹಿಸಿಕೊಡಲಾಗಿದೆ.

ಮಂಗಳೂರು ಮಹಾನಗರ ಪಾಲಿಕರು ಒಳಚರಂಡಿಯ ವ್ಯವಸ್ಥೆಯಲ್ಲಿ ಕಳೆದ 10 ದಿನಗಳಿಂದಲೂ ಗುತ್ತಿಗೆದಾರರು ವಾಹನಗಳನ್ನು ಚಾಲನೆ ಮಾಡದೆ ಹಾಗೂ ಎಮ್‌ಎಸ್‌ಇಝಡ್‌ಗೆ ಹೊರಗುತ್ತಿಗೆಯ ಸಿಬ್ಬಂದಿಗಳು, ಮುಷ್ಕರ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳು ಉದ್ಭವವಾಗಿದೆ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ.

ಈ ಸಮಸ್ಯೆಯಿಂದಾಗಿ ಸಾರ್ವಜನಿಕರಿಗೆ ತುಂಬಾ ಅನಾನುಕೂಲವಾಗುತ್ತಿದ್ದು, ಇದರ ಬಗ್ಗೆ ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷರು ಮಾನ್ಯ ಆಯುಕ್ತರು ಹಾಗೂ ಗುತ್ತಿಗೆದಾರರು ಎಮ್‌ಎಸ್‌ಇಜೆಡ್ ಅಧಿಕಾರಿಗಳು ಮತ್ತು ಪ್ರತಿಭಟನೆ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿ ಗಳನ್ನು ಒಳಗೊಂಡಂತೆ ಸಭೆ ನಡೆಸಿ ಅವರ ಮನವೊಲಿಸಿ ಗುತ್ತಿಗೆದಾರರು ಮತ್ತು ಎಮ್‌ಎಸ್‌ಇಜೆಡ್ ಅಧಿಕಾರಿಗಳಿಗೆ ಒಳಚರಂಡಿ ವಟೇಲ್ ಮತ್ತು ಎಸ್‌ಟಿಪಿಗಳನ್ನು ಚಾಲನೆ ಮಾಡಲು ಸೂಚಿಸಲಾಗಿತ್ತು.

ಆದರೆ ಪ್ರತಿಭಟನಾ ನಿರತ ಕಾರ್ಮಿಕರು ತಮ್ಮ ಪ್ರತಿಭಟನೆ ಮುಂದುವರಿಸಿದ್ದಾರೆ. ಮಹಾನಗರ ಪಾಲಿಕೆಯಿಂದ ಎಲ್ಲ ರೀತಿಯ ಪ್ರಯತ್ನಪಟ್ಟರೂ ಹೊರಗುತ್ತಿಗೆ ನೌಕರರು ಸ್ಪಂದಿಸದೇ ಇರುವುದ ರಿಂದ ಗುತ್ತಿಗೆದಾರರು ಇರುವ ಸಿಬ್ಬಂದಿಯನ್ನು ಉಪಯೋಗಿಸಿಕೊಂಡು ತಾತ್ಕಾಲಿಕವಾಗಿಯಾದರೂ ಒಳಚರಂಡಿ ವಾಹನಗಳನ್ನು ಹಾಗೂ ವೆಟ್‌ವೆಲ್‌ಗಳನ್ನು ಚಾಲನೆ ಮಾಡಲು ಪ್ರಯತ್ನಿಸುವ ವೇಳೆಯಲ್ಲಿ ಪ್ರತಿಭಟನಾ ನಿರತ ಕೆಲವು ವ್ಯಕ್ತಿಗಳು ಪುನಃ ಚಾಲನೆ ಮಾಡಿದ್ದಲ್ಲಿ ಒಳಚರಂಡಿ ನೀರನ್ನು ಮೈಮೇಲೆ ಸುರಿದುಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದರು.

Ashika S

Recent Posts

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

13 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

23 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

59 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

2 hours ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago