ಮಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಸಂಖ್ಯೆ ತೀವ್ರಗೊಂಡಿದ್ದು, ಇದುವರೆಗೆ 8 ಸಾವಿರಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 6 ತಿಂಗಳು ಬಾಕಿ ಉಳಿದಿದ್ದು, ಆಕಾಂಕ್ಷಿಗಳ ಸಂಖ್ಯೆ ದಿನ ಕಳೆದಂತೆ ವೃದ್ಧಿಯಾಗಲಾರಂಭಿಸಿದೆ. ಕಾಂಗ್ರೇಸ್ ನಲ್ಲಿ ಈಗಾಗಲೇ ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.
ಪಕ್ಷದ ಚುನಾವಣೆ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದು, ಇದೀಗ ಅರ್ಜಿ ಸಲ್ಲಿಸಲು ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.