ಮಂಗಳೂರು

ಮಂಗಳೂರು: ಹೆತ್ತವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳ ಭವಿಷ್ಯ ರೂಪಿಸಬೇಕು

ಮಂಗಳೂರು: ಹೆತ್ತವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಭವಿಷ್ಯವನ್ನು ರೂಪಿಸಬೇಕು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿ ರಶ್ಮಿ .ಆರ್. ಹೇಳಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕ , ಇನ್ನರ್ ವೀಲ್ ಕ್ಲಬ್ ಮಂಗಳೂರು ನಾರ್ತ್ ,ದೇವಿಕಾ ಯೋಗ ತರಬೇತಿ ಕೇಂದ್ರ ಹಾಗೂ ಪರಿಸರ ಅದ್ಯಯನ ಕೇಂದ್ರ ನೆಲ್ಲಿಗುಡ್ಡೆ ಇದರ ಸಹಭಾಗಿತ್ವದಲ್ಲಿ ನಗರದ ಹ್ಯಾಟ್ ಹಿಲ್ ನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ( ವನಿತಾ ಪಾರ್ಕ್ ) ಮಕ್ಕಳ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಮಕ್ಕಳ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಗುರುಪ್ರಸಾದ್ ಮಾತನಾಡಿ ಅಂಗನವಾಡಿ ಮಕ್ಕಳಿಗೆ ಕಾರ್ಯಕ್ರಮ ಆಯೋಜಿಸುವ ಮೂಲಕ ಇದೊಂದು ಮಾದರಿ ಕಾರ್ಯಕ್ರಮವಾಗಿದೆ. ಇಂತಹ ಕಾರ್ಯಕ್ರಮಗಳು ಎಲ್ಲಾ ಕಡೆಗಳಲ್ಲೂ ನಡೆಯುವ ಮೂಲಕ ಮಕ್ಕಳ ಬೌಧಿಕ ಸಾಮರ್ಥ್ಯವನ್ನು ಹೆಚ್ಚಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಸಂಧ್ಯಾ ಆಚಾರ್ ,  ಅನಘಾ ರಿಫೈನರೀಸ್ ನ ಆಡಳಿತ ನಿರ್ದೇಶಕ ಸಾಂಬಾಶಿವ ರಾವ್ , ಸತ್ಯವಾಣಿ,  ಅನ್ನಪೂರ್ಣ, ಇನ್ನರ್ ವೀಲ್ ಕ್ಲಬ್ ನ ಸದಸ್ಯೆ ಡಾ. ಶಾಂತಿ ,ದೇವಿಕಾ ಯೋಗ ತರಬೇತಿ ಕೇಂದ್ರದ ಸಂಚಾಲಕಿ ದೇವಿಕಾ ಪುರುಷೋತ್ತಮ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಬ್ಯಾಂಕ್ ಆಫ್ ಬರೋಡಾ ಹಿರಿಯ ಪ್ರಬಂಧಕ ಸತೀಶ್ ಪಾಟ್ಕರ್ , ಭಾರತೀಯ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯ ಪಿ.ಬಿ.ಹರೀಶ್ ರೈ , ರಾಜೇಶ್ ದಡ್ಡಂಗಡಿ , ಸಂಧ್ಯಾ ನಾಯಕ್ , ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ರವೀಂದ್ರನಾಥ ಉಚ್ಚಿಲ್ ಹಾಗೂ ಬಿಜೈ ಕಾಪಿಕಾಡು ಅಂಗನವಾಡಿ ಶಾಲೆಯ ಶಿಕ್ಷಕಿ ನಂದಾ ಉಪಸ್ಥಿತರಿದ್ದರು. ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಪುಷ್ಪರಾಜ್ ಬಿ.ಎನ್. ವಂದಿಸಿದರು, ಮೈಮ್ ರಾಮದಾಸ್ ಹಾಗೂ ವಿಭಾ ಶ್ರೀನಿವಾಸ್ ನಾಯಕ್ ಮಕ್ಕಳಿಗೆ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago