News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ, ಪಿಎಫ್ ಐ ನಾಯಕರನ್ನು ಗುರಿಯಾಗಿಸಿಕೊಂಡಿದ್ದಾರೆ

PFI leaders have been targeted in connection with Praveen Nettaru's murder case, says PFI
Photo Credit : News Kannada

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪಿಎಫ್ ಐ ಪ್ರಮುಖರ ನಾಯಕರನ್ನು ಎನ್.ಐ.ಎ ಗುರಿಯಾಗಿಸಿಕೊಂಡಿದೆ. ಸರಕಾರ ಹಗೆತನದ ಕ್ರಮ ಅನುಸರಿಸುತ್ತಿದೆ ಎಂದು ಪಿಎಫ್ ಐ ಆರೋಪಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿಎಫ್ ಐ ಯ  ರಾಜ್ಯ  ಕಾರ್ಯದರ್ಶಿ ಎ.ಕೆ.ಅಶ್ರಫ್, ದ.ಕ. ಜಿಲ್ಲೆಯ ಸರಣಿ ಹತ್ಯೆ ಪ್ರಕರಣ ಸಹಿತ, ರಾಜ್ಯದಲ್ಲಿ ಇತ್ತೀಚೆಗೆ ಹಲವು ಕೊಲೆ ಪ್ರಕರಣಗಳು ನಡೆದಿವೆ. ಆದರೆ ಶಿವಮೊಗ್ಗದ ರೌಡಿ ಶೀಟರ್ ಹರ್ಷ ಮತ್ತು ಸುಳ್ಯದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ತನಿಖೆಗೆ ನೀಡಿದ ಮಹತ್ವವನ್ನು ರಾಜ್ಯ ಬಿಜೆಪಿ ಸರಕಾರ ಬೆಳಗಾವಿಯ ಅರ್ಬಾಝ್, ಸಮೀರ್ ಶಹಾಪೂರ, ಸುಳ್ಯದ ಮಸೂದ್, ಸುರತ್ಕಲ್‌ ನ ಫಾಝಿಲ್ ಹತ್ಯೆ ಪ್ರಕರಣದಲ್ಲಿ ನೀಡಿಲ್ಲ ಎಂದು ದೂರಿದ್ದಾರೆ.

ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಸಾಮಾನ್ಯ ಚೂರಿ ಇರಿತ ಘಟನೆಯ ಆರೋಪಿಗಳಾಗಿರುವ ಮುಸ್ಲಿಮ್ ಯುವಕರ ಮೇಲೂ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇದು ಬಿಜೆಪಿ ಎನ್.ಐ.ಎಯಂತಹ ತನಿಖಾ ಸಂಸ್ಥೆಗಳನ್ನು ಯಾವ ರೀತಿ ದುರ್ಬಳಕೆ ಮಾಡುತ್ತಿದೆ ಎಂಬುದಕ್ಕೆ ನಿದರ್ಶನವಾಗಿದೆ.

ಹರ್ಷನ ಕೊಲೆ ಗ್ಯಾಂಗ್ ವಾರ್‌ಗೆ ಸಂಬಂಧಿಸಿದ್ದಾಗಿದೆ ಮತ್ತು ಪ್ರವೀಣ್ ಕೊಲೆ ಸ್ಥಳೀಯವಾಗಿ ಕೋಮು ವೈಷಮ್ಯದಿಂದ ನಡೆದ ಘಟನೆ ಎಂಬುದನ್ನು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗಪಡಿಸಿದ್ದಾರೆ. ಆದರೆ ರಾಜ್ಯದಲ್ಲಿ ಕೋಮು ವೈಷಮ್ಯದಲ್ಲಿ ನಡೆದ ಕೊಲೆ ಪ್ರಕರಣಗಳನ್ನು ಸಮಾನವಾಗಿ ಪರಿಗಣಿಸಬೇಕಾಗಿದ್ದ ಬಿಜೆಪಿ ಸರಕಾರ ಪಕ್ಷಪಾತದ ಧೋರಣೆ ಅನುಸರಿಸುತ್ತಿದೆ. ಮುಸ್ಲಿಮ್ ಯುವಕರು ಆರೋಪಿಗಳಾಗಿರುವ ಪ್ರಕರಣಗಳನ್ನು ಮಾತ್ರ ಎನ್.ಐ.ಎ.ಗೆ ವಹಿಸುತ್ತಿರುವುದು ಸಂಶಯಾಸ್ಪದ ಎಂದು  ಹೇಳಿದರು.

ಪ್ರವೀಣ್ ಕೊಲೆ ಘಟನೆಯ ಬಳಿಕ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡಿದ್ದರು. ಈ ಕಾರಣಕ್ಕಾಗಿ ಕಾರ್ಯಕರ್ತರ ಆಕ್ರೋಶವನ್ನು ತಣಿಸಲು ರಾಜ್ಯ ಸರಕಾರವು ಈ ಪ್ರಕರಣದ ಎನ್.ಐ.ಎ ತನಿಖೆ ವಹಿಸುವ ಮೂಲಕ ಪಿಎಫ್‌ಐ ವಿರುದ್ಧ ಪ್ರತೀಕಾರಾತ್ಮಕ ಕ್ರಮವನ್ನು ಕೈಗೊಂಡಿದೆ. ಈ ಬೆಳವಣಿಗೆಗಳ ನಂತರ ಬಿಜೆಪಿ ಎನ್.ಐ.ಎಯನ್ನು ದುರ್ಬಳಕೆ ಮಾಡಿಕೊಂಡು ಇದೀಗ ನಮ್ಮ ಸಂಘಟನೆಗಳ ನಾಯಕರ ಮನೆ, ಕಚೇರಿಗಳ ಮೇಲೆ ದಾಳಿಗಳನ್ನು ನಡೆಸಲಾಗುತ್ತಿದೆ.

ಬಿಜೆಪಿ ಸರಕಾರವು ತನ್ನ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ತನ್ನ ಬದ್ಧ ಸೈದ್ಧಾಂತಿಕ ವಿರೋಧಿಯಾಗಿರುವ ಪಿಎಫ್‌ಐ ವಿರುದ್ಧ ವ್ಯಾಪಕ ಅಪಪ್ರಚಾರಗಳನ್ನು ನಡೆಸುತ್ತಾ ಬರುತ್ತಿದೆ. ಮಾತ್ರವಲ್ಲ, ಸಂದರ್ಭಕ್ಕೆ ಅನುಸಾರವಾಗಿ ಇ.ಡಿ.,ಎನ್.ಐ.ಎ ಮೊದಲಾದ ತನಿಖಾ ಏಜೆನ್ಸಿಗಳನ್ನು ನಿರಂತರವಾಗಿ ಭೂ ಬಿಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು