ಮಂಗಳೂರು

ಮಂಗಳೂರು: ಪ್ರಧಾನಿ ಮೋದಿಯವರಿಂದ 6 ವಿವಿಧ ಬಹುಕೋಟಿ ರೂ.ನ ಯೋಜನೆ ಲೋಕಾರ್ಪಣೆ

ಮಂಗಳೂರು: ಪ್ರಧಾನಿ ಮೋದಿಯವರ ಸೆ.2ರಂದು ಮಂಗಳೂರಿನಲ್ಲಿ ಎನ್ಎಂಪಿಎ, ಎಂಆರ್ ಪಿಎಲ್ ನ 6 ವಿವಿಧ ಬಹುಕೋಟಿ ರೂ.ನ ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.

ಮಂಗಳೂರಿನಲ್ಲಿಂದು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಮಾತನಾಡಿರುವ ಅವರು, ಕೊಚ್ಚಿನ್ ನಿಂದ ಆಗಮಿಸುವ ಪ್ರಧಾನಿಯವರು ಎನ್ಎಂಪಿಎಗೆ ತೆರಳಲಿದ್ದಾರೆ. ಅಲ್ಲಿಂದ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೇಂದ್ರ, ರಾಜ್ಯ ಸರಕಾರದ ವಿವಿಧ ಫಲಾನುಭವಿಗಳಿಗೆ ಯೋಜನೆಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಯಶಸ್ಸಿಗೆ ದ.ಕ.ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿದ್ದು, ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಬಂದು ನೂಕುನುಗ್ಗಲು, ಗೊಂದಲ ಆಗದಂತೆ ಸಹಕರಿಸಬೇಕು. ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದರು.

ಕಾರ್ಯಕ್ರಮ ನಡೆಯುತ್ತಿರುವ ಮೈದಾನದ ಅಕ್ಕಪಕ್ಕದಲ್ಲಿನ‌ ತೊಂದರೆ ಇಲ್ಲದ ಯಾವುದೇ ಅಂಗಡಿ – ಮುಂಗಟ್ಟುಗಳನ್ನು ಮುಚ್ಚಲಾಗುತ್ತಿಲ್ಲ. ಸುರಕ್ಷತೆ ಹಾಗೂ ಆಯೋಜನೆಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕಾ ದೃಷ್ಟಿಯಿಂದ ಕೆಲವೊಂದು ಆಯ್ದ ಅಂಗಡಿಗಳನ್ನು ಮಾತ್ರ ಮುಚ್ಚುವಂತೆ ಮನವಿ ಮಾಡಿದ್ದೇವೆ. ಫಲಾನುಭವಿಗಳನ್ನು ಕಡ್ಡಾಯವಾಗಿ ಬರಬೇಕೆಂದು ಯಾವುದೇ ಒತ್ತಡ ಹೇರಿಲ್ಲ. ಎಲ್ಲರಿಗೂ ಆಮಂತ್ರಣ ಪತ್ರಿಕೆ ಕಳುಹಿಸಲಾಗಿದೆ. ಇಚ್ಛೆಉಳ್ಳವರು ಮಾತ್ರ ಆಗಮಿಸಬಹುದು ಎಂದು ದ‌.ಕ.ಜಿಲ್ಲಾಧಿಕಾರಿ ರಾಜೇಂದ್ರ ಕೆ ವಿ ಹೇಳಿದರು.

ಇನ್ನು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ, ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಯಾವುದೇ ಆಕ್ಷೇಪಾರ್ಹ ವಸ್ತುಗಳನ್ನು ತರುವಂತಿಲ್ಲ. ಕಮಿಷನರೇಟ್ ವ್ಯಾಪ್ತಿಯ 9 ಜಂಕ್ಷನ್‌ಗಳಲ್ಲಿ‌ ಸಂಚಾರ ಮಾರ್ಗ ಬದಲಿಸಲಾಗುತ್ತದೆ. 15 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಸಿಎಆರ್, ಕೆಎಸ್ಸಾರ್ಪಿ, ಹೋಮ್‌ಗಾರ್ಡ್ ಸಹಿತ ವಿವಿಧ ಘಟಕಗಳ ಅಧಿಕಾರಿ, ಸಿಬ್ಬಂದಿಗಳನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗುತ್ತದೆ ಎಂದರು. ಅಲ್ದೇ ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಕಾರ್ಯಕ್ರಮದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಬಗ್ಗೆ 2 ಪ್ರಕರಣ ದಾಖಲಿಸಲಾಗಿದೆ ಎಂದರು.

Gayathri SG

Recent Posts

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

3 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

18 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

40 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

42 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

59 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 hour ago