Categories: ಮಂಗಳೂರು

ಮಂಗಳೂರು: ಸೇಲ್ಸ್‌ಮ್ಯಾನ್‌ ಹತ್ಯೆ ಪ್ರಕರಣ, ಪ್ರಮುಖ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಕುಲದೀಪ್ ಜೈನ್

ಮಂಗಳೂರು: ಕಳೆದ ತಿಂಗಳು ಹಾಡುಹಗಲೇ ನಗರದ ಜುವೆಲರಿ ಅಂಗಡಿಗೆ ನುಗ್ಗಿ ಸೇಲ್ಸ್‌ಮ್ಯಾನ್‌ನ್ನು ಹತ್ಯೆಗೈದಿದ್ದ ಆರೋಪಿ ಶಿಫಾಸ್(30) ಒಬ್ಬರೇ ಇರುವ ಚಿನ್ನಾಭರಣ ಅಂಗಡಿಗಳನ್ನು ಗುರಿಯಾಗಿಟ್ಟುಕೊಂಡು ಹೊಂಚು ಹಾಕುತ್ತಿದ್ದ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆರೋಪಿ ಮಂಗಳೂರು ಮಾತ್ರವಲ್ಲದೆ ತಮಿಳುನಾಡು, ಕೇರಳ, ಗೋವಾದಲ್ಲಿಯೂ ಇದೇ ರೀತಿಯ ಕೃತ್ಯ ನಡೆಸುವ ಉದ್ದೇಶದಿಂದ ಓಡಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ಇಲ್ಲಿ ನಡೆದಿರುವ ಕೃತ್ಯದ ಮಾದರಿಯಲ್ಲಿ ಬೇರೆ ರಾಜ್ಯಗಳಲ್ಲಿ ನಡೆದಿದ್ದರೆ ಅದರ ಮಾಹಿತಿ ನೀಡುವಂತೆ ಅಲ್ಲಿನ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಬ್ಯಾಗ್‌ನಿಂದ  ಆರೋಪಿಯ ಗುರುತು ಪತ್ತೆ ಸವಾಲಾಗಿತ್ತು. ಆತನ ಮುಖಚರ್ಯೆ ಸ್ಪಷ್ಟವಾಗಿ ಯಾವುದೇ ಸಿಸಿ ಕೆಮರಾದಲ್ಲಿ ದಾಖಲಾಗಿರಲಿಲ್ಲ. ಹಾಗಾಗಿ ಆತನ ಚಹರೆ, ಸಿಸಿ ಕೆಮರಾದಲ್ಲಿ ದಾಖಲಾಗಿದ್ದ ಚಿತ್ರಗಳನ್ನು ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಸಾರ್ವಜನಿಕರಿಂದ ಮಾಹಿತಿ ಕೋರಲಾಗಿತ್ತು. ಇದನ್ನು ಗಮನಿಸಿದ ಕಾಸರಗೋಡಿನ ಪೊಲೀಸರು ಓರ್ವ ಶಂಕಾಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದು ಮಾಹಿತಿ ನೀಡಿದ್ದರು. ಆತ ಧರಿಸಿದ್ದ ಬ್ಯಾಗ್‌ನ ಆಧಾರದಲ್ಲಿ ಗುರುತು ಪತ್ತೆ ಮಾಡಿದ್ದರು. ಬಳಿಕ ಮಂಗಳೂರು ಪೊಲೀಸರು ವಿಚಾರಿಸಿದಾಗ ಆತನೇ ಆರೋಪಿ ಎಂಬುದು ಗೊತ್ತಾಗಿದೆ ಎಂದು ಆಯುಕ್ತರು ತಿಳಿಸಿದರು.

ರಕ್ತದ ಕಲೆ ಸಿಗದಿರಲು 2-3 ಬಟ್ಟೆ: ತಾನು ಚೂರಿಯಿಂದ ಇರಿದ ಅನಂತರ ತನ್ನ ಬಟ್ಟೆ ಮೇಲೆ ರಕ್ತ ಚೆಲ್ಲುವುದರಿಂದ ಬಟ್ಟೆಯನ್ನು ಎಲ್ಲಿಯಾದರೂ ಬಿಸಾಡಿ ಹೋಗುವುದು ಆರೋಪಿಯ ಯೋಚನೆಯಾಗಿತ್ತು. ಅದಕ್ಕಾಗಿ 3-4 ಬಟ್ಟೆಗಳನ್ನು ಒಂದರ ಮೇಲೆ ಒಂದರಂತೆ ಧರಿಸುತ್ತಿದ್ದ. ಕಾಸರಗೋಡಿನಲ್ಲಿ ವಶಕ್ಕೆ ಪಡೆಯುವಾಗಲೂ ಅದೇ ರೀತಿ ಬಟ್ಟೆ ಧರಿಸಿದ್ದ. ಆತ ಕಾಸರಗೋಡಿನಲ್ಲಿ ಅಂತಹುದೇ ಕೃತ್ಯ ನಡೆಸಲು ಹೊಂಚು ಹಾಕುತ್ತಿದ್ದುದು ಗೊತ್ತಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

Ashika S

Recent Posts

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

1 min ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

14 mins ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

24 mins ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

9 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

9 hours ago