Categories: ಮಂಗಳೂರು

ಮಂಗಳೂರು: ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಪೊಲೀಸ್ ಶ್ವಾನ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶ್ವಾನ ದಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಶ್ವಾನವೊಂದು ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಮೃತಪಟ್ಟ ಘಟನೆ ನಡೆದಿದೆ. 7 ವರ್ಷ 10 ತಿಂಗಳು ವಯಸ್ಸಿನ ಜ್ವಾಲಾ ಮೃತಪಟ್ಟ ಶ್ವಾನ.

ಡಾಬರ್‌ಮನ್ ಪಿಂಚರ್ ತಳಿಗೆ ಸೇರಿದ ಈಕೆ ದಕ್ಷಿಣ ಕನ್ನಡ ಜಿಲ್ಲಾ ಶ್ವಾನ ದಳದಲ್ಲಿ ಅಪರಾಧ ಪ್ರಕರಣಗಳ ಪತ್ತೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಹಾಯ ಮಾಡುತ್ತಿದ್ದಳು. ಕಳೆದ ಕೆಲವು ಸಮಯಗಳಿಂದ ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜ್ವಾಲಾ ಜನವರಿ 3ರ ಮಂಗಳವಾರ ಬೆಳಗ್ಗೆ 7 ಗಂಟೆಗೆ ಸಾವನ್ನಪ್ಪಿತು.

ಮೃತ ಶ್ವಾನಕ್ಕೆ ಸಕಲ ಗೌರವಾದಿಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಜ್ವಾಲಾಳನ್ನು ಸಿಬಂದಿ ಕುಮಾರ ಕತ್ಲೇರ ನಿರ್ವಹಿಸುತ್ತಿದ್ದರು.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

43 seconds ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

12 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

19 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

21 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

33 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

42 mins ago