News Karnataka Kannada
Monday, May 06 2024
ಮಂಗಳೂರು

ಮಂಗಳೂರು: ಪ್ರವೀಣ್‌ ಕುಮಾರ್‌ ಬಿಡುಗಡೆಗೆ ಕುಟುಂಬಸ್ಥರಿಂದ ತೀವ್ರ ಆಕ್ಷೇಪ

Mangaluru: Praveen Kumar's family strongly objected to his release
Photo Credit : By Author

ಮಂಗಳೂರು: ಸೋದರತ್ತೆ ಸಹಿತ ಅವರ ಕುಟುಂಬದ ನಾಲ್ವರನ್ನು  1994ರಲ್ಲಿ ವಾಮಂಜೂರಿನಲ್ಲಿ   ಹತ್ಯೆ ಮಾಡಿದ್ದ  ಪ್ರವೀಣ್‌ ಕುಮಾರ್‌ನನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಸರಕಾರ ಸಿದ್ಧತೆ ನಡೆಸುತ್ತಿದ್ದು, ಇದಕ್ಕೆ ಸಂತ್ರಸ್ತರ  ಕುಟುಂಬದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈತನನ್ನು ಬಿಡುಗಡೆ ಮಾಡುವ ಕುರಿತು ಬಂಧುಗಳ ಅಭಿಪ್ರಾಯ ಪಡೆಯಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿತ್ತು. ಆದರೆ ಪ್ರವೀಣ್‌ನನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಬಾರದೆಂದು ಕುಟುಂಬದವರು ಇಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವ್ರಿಗೆ ಮನವಿ ಸಲ್ಲಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೆರಿಯಡ್ಕ ನಿವಾಸಿ ಪ್ರವೀಣ್‌ ಕುಮಾರ್‌ 1994ರ ಫೆಬ್ರವರಿ 23ರ ಮಧ್ಯರಾತ್ರಿ ವಾಮಂಜೂರಿನಲ್ಲಿದ್ದ ತನ್ನ ಅತ್ತೆ (ತಂದೆಯ ತಂಗಿ) ಅಪ್ಪಿ ಶೇರಿಗಾರ್ತಿ, ಅವರ ಪುತ್ರ  ಗೋವಿಂದ, ಪುತ್ರಿ  ಶಕುಂತಳಾ ಹಾಗೂ ಶಕುಂತಾಳರ ಪುತ್ರಿ ದೀಪಿಕಾಳನ್ನು  ಕೊಲೆ ಮಾಡಿದ್ದ. ಈ ಪ್ರಕರಣ  ದೇಶದಲ್ಲೇ ದೊಡ್ಡ ಸಂಚಲನ ಮೂಡಿಸಿತ್ತು.  ಕೆಳ ಹಂತದ ನ್ಯಾಯಾಲಯದಿಂದ ಹಿಡಿದು ಸುಪ್ರೀಂಕೋರ್ಟ್‌ನಲ್ಲೂ ಪ್ರವೀಣ್‌ ಮೇಲಿನ ಆರೋಪ  ಸಾಬೀತಾಗಿತ್ತು. 2003ರಲ್ಲಿ ಸುಪ್ರೀಂ ಕೋರ್ಟ್‌ ಈತನಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿತ್ತು.  ಇದನ್ನು ಪ್ರಶ್ನಿಸಿದ್ದ ಪ್ರವೀಣ್‌ ಕ್ಷಮಾದಾನ ನೀಡುವಂತೆ ರಾಷ್ಟ್ರಪತಿಗೆ ಮನವಿ ಮಾಡಿದ್ದು, ಅದು  10 ವರ್ಷಗಳ ಕಾಲ  ವಿಲೇವಾರಿಯಾಗದೆ ಬಾಕಿ ಉಳಿದಿತ್ತು. ಈ ನಡುವೆ ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯನ್ನು ಕೊಂದಿದ್ದ  ಮೂವರ ಗಲ್ಲು ಶಿಕ್ಷೆ ರದ್ದು ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿತ್ತು. ಇದನ್ನೇ ಆಧಾರವಾಗಿಟ್ಟು ಪ್ರವೀಣ್‌  ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದ. ಸುಪ್ರೀಂಕೋರ್ಟ್‌ ಗಲ್ಲು ಶಿಕ್ಷೆಯನ್ನು  ಜೀವಾವಧಿಗೆ ಪರಿವರ್ತಿಸಿತ್ತು. ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿ ನಲ್ಲಿರುವ ಪ್ರವೀಣ್‌ನನ್ನು ಸನ್ನಡತೆ ಕಾರಣ  ಬಿಡುಗಡೆ ಮಾಡುವ ಕುರಿತು ಅಭಿಪ್ರಾಯ ವರದಿಯನ್ನು ಸಂಗ್ರಹಿಸಲು ಜಿಲ್ಲಾ ಎಸ್ಪಿ ಕಚೇರಿಗೆ ಜುಲೈ 23ರಂದು ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯಿಂದ ಆದೇಶ ಮಾಡಲಾಗಿತ್ತು.

ತನ್ನದೇ ಕುಟುಂಬ ಮಂದಿಯನ್ನು ಕೊಂದ ಪಾತಕಿ ಬಿಡುಗಡೆ ಕುರಿತು ಕುಟುಂಬದವ್ರು ಆತಂಕ ಹಾಗೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಣದ ಆಸೆಗಾಗಿ ಬಾಲಕಿ ಸಹಿತ ನಾಲ್ವರನ್ನು ಅಮಾನುಷವಾಗಿ ಕೊಲೆಗೈದಿರುವ ಆತ ಜೈಲಿನಿಂದ ಹೊರ ಬಂದರೆ ಸಮಾಜಕ್ಕೆ ಅಪಾಯವಿದೆ. ಸ್ವತಃ ಆತನ ಕುಟುಂಬದವರಿಗೂ  ಅವನು ಬಂಧಮುಕ್ತನಾಗುವುದರ ಬಗ್ಗೆ ಆತಂಕವಿದೆ. ಆತನನ್ನು ಬಿಡುಗಡೆ ಮಾಡಬಾರದು ಎಂದು ಕಳಕಳಿಯಾಗಿ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30359
ಶರಣ್‌ ರಾಜ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು