Categories: ಮಂಗಳೂರು

ಮಂಗಳೂರು: ಮಾನವೀಯತೆ ಆಧಾರದಲ್ಲಿ ಪ್ರವೀಣ್‌ ನೆಟ್ಟಾರು ಪತ್ನಿ ಉದ್ಯೋಗಕ್ಕೆ ಮರು ನೇಮಕ – ಸಿಎಂ

ಮಂಗಳೂರು: ಸರ್ಕಾರ ಬದಲಾದ ಬೆನ್ನಲ್ಲೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಅವರಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದ್ದು, ಇದೀಗ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ ಎಂದರು. ಇನ್ನು ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Ashika S

Recent Posts

ಜೆಡಿಎಸ್‌ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್‌

ಜೆಡಿಎಸ್‌ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್‌

7 mins ago

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ ಕಾಂಗ್ರೆಸ್‌ ಅಭ್ಯರ್ಥಿ

ಇದೀಗ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಹೊಡೆತ ಬಿದ್ದಿದೆ.   ಸೂರತ್, ಇಂದೋರ್ ಬಳಿಕ ಇದೀಗ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್…

10 mins ago

ಫೇಕ್‌ ನ್ಯೂಸ್‌: ಕೋವಿಶೀಲ್ಡ್​ ಪಡೆದವರು ತಂಪುಪಾನಿಯ,ಐಸ್​ ಕ್ರೀಮ್ ಸೇವಿಸಬಾರದು

ಕೊರೊನಾ ಸಂದರ್ಭದಲಲಿ ಕೋವಿಶೀಲ್ಡ್‌ ಪಡೆದವರು ತಂಪುಪಾನಿಯ,ಐಸ್​ ಕ್ರೀಮ್ ಸೇವಿಸಬಾರದು ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ

25 mins ago

ಬಿಸಿಲಿನ ಶಾಖಕ್ಕೆ ರಾಯಚೂರಿನಲ್ಲಿ ಐವರು ಬಲಿ : ಹೊತ್ತಿ ಉರಿದ ಕಾರು

ಜಿಲ್ಲೆಯಲ್ಲಿ ಬಿಸಿಲು ಆವರಿಸಿಕೊಂಡಿದ್ದು, ಬಿಸಿಲಿನ ಸಾಖಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ಹಾಗೂ ಶಕ್ತಿನಗರದಲ್ಲಿ ಕಾರಿಗೆ ಬೆಂಕಿ…

41 mins ago

ಇಂದು (ಮೇ 04) ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ

ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು…

42 mins ago

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಬೀದಿ‌ ಕಾಳಗ : ವಿಡಿಯೋ ವೈರಲ್

ಮಂಗಳೂರಿನ ಹೊರ ವಲಯ ವಳಚ್ಚಿಲ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಜಗಳವಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜ್ ಫೆಸ್ಟ್…

1 hour ago