Categories: ಮಂಗಳೂರು

ಮಂಗಳೂರು: ಪತ್ರಿಕಾ ದಿನಾಚರಣೆ ಹಾಗೂ ಡಾ.ಹೆರ್ಮನ್ ಮ್ಯೋಗ್ಲಿಂಗ್ ಸ್ಮರಣೆ ಕಾರ್ಯಕ್ರಮ

ಮಂಗಳೂರು: ಕನ್ನಡ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರದ ನೆನಪಿನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಈ ಪತ್ರಿಕೆ ಹಾಗೂ ಅದರ ಸಂಪಾದಕ ಡಾ.ಹೆರ್ಮನ್ ಮ್ಯೋಗ್ಲಿಂಗ್ ಅವರ ಚರಿತ್ರೆಯನ್ನು ಜನತೆಯ ಮುಂದಿಡುವ ಕೆಲಸ ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಹೇಳಿದರು.

ಮಂಗಳೂರು ಬಲ್ಮಠ ಥಿಯೋಲಾಜಿಕಲ್ ಕಾಲೇಜು ಆವರಣದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ನಡೆದ ಪತ್ರಿಕಾ ದಿನಾಚರಣೆ ಹಾಗೂ ಡಾ.ಹೆರ್ಮನ್ ಮ್ಯೋಗ್ಲಿಂಗ್ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 180 ವರ್ಷಗಳ ಹಿಂದಿನ ಕಾಲಘಟ್ಟದಲ್ಲಿ ಸವಾಲುಗಳ ನಡುವೆ ಪತ್ರಿಕೆ ಆರಂಭಿಸಿದ ಹೆರ್ಮನ್ ಮ್ಯೋಗ್ಲಿಂಗ್ ಅವರ ಸಾಧನೆ, ಶಾಲೆಗಳನ್ನು ಆರಂಭಿಸಿದ ಅವರ ಸೇವಾ ಬದ್ಧತೆ ಸದಾ ಸ್ಮರಣೀಯ ಎಂದು ಹರೀಶ್ ಕುಮಾರ್ ಅಭಿಪ್ರಾಯಪಟ್ಟರು.

ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಂ.ವಾಟ್ಸನ್ ಅವರು ಮಾತನಾಡಿ, ಕನ್ನಡದ ಮೊದಲ ಪತ್ರಿಕೆಯನ್ನು ಆರಂಭಿಸಿದ ಹೆರ್ಮನ್ ಮ್ಯೋಗ್ಲಿಂಗ್ ಅವರ ಹೆಸರಿನಲ್ಲಿ ಮಂಗಳೂರಿನಲ್ಲಿ ಯಾವುದೇ ಸ್ಮಾರಕಗಳು ಇಲ್ಲದೇ ಇರುವುದರಿಂದ ನಗರದ ರಸ್ತೆಯೊಂದಕ್ಕೆ ಹಾಗೂ ವೃತ್ತವೊಂದಕ್ಕೆ ಹೆರ್ಮನ್ ಮ್ಯೋಗ್ಲಿಂಗ್ ಅವರ ಹೆಸರು ಇರಿಸಬೇಕೆಂದು ಮನವಿ ಮಾಡಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಈದಿನ ಡಾಟ್ ಕಾಮ್ ಸಂಯೋಜಕ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಯು.ಹೆಚ್ ಶುಭಕೋರಿದರು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮುತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರು ಮಾತನಾಡಿ, ಮಂಗಳೂರು ಸಮಾಚಾರ ಪತ್ರಿಕೆ ಉದಯಿಸಿದ ಸ್ಥಳದಲ್ಲಿಯೇ ಮ್ಯೋಗ್ಲಿಂಗ್ ಅವರಿಗೆ ಗೌರವ ಸಲ್ಲಿಸುವ ಕಾರ್ಯವನ್ನು ಯೂನಿಯನ್ ವತಿಯಿಂದ ಪ್ರತಿವರ್ಷ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

17 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

35 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

56 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

1 hour ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago