News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಪ್ರೊ. ಪಿ.ಎಸ್ ಯಡಪಡಿತ್ತಾಯ ಅವರಿಗೆ 2022 ರ ಅತ್ಯುತ್ತಮ ವಿಸಿ ಗೌರವ

Mangaluru: Prof. P.S. Yadapadithaya honoured with best VC of 2022
Photo Credit :

ಮಂಗಳೂರು: ಯೂನಿವರ್ಸಲ್ ಮೆಂಟರ್ ಅಸೋಸಿಯೇಷನ್ ಮತ್ತು ಬ್ರೈನ್ ವಂಡರ್ಸ್ ಸಹಯೋಗದಲ್ಲಿ ಆ.27ರಂದು ನವದೆಹಲಿಯಲ್ಲಿ ನಡೆದ ಎರಡನೇ ಉನ್ನತ ಶಿಕ್ಷಣದ ಆವಿಷ್ಕಾರ ಮತ್ತು ತಂತ್ರಜ್ಞಾನ ಶೃಂಗಸಭೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅವರಿಗೆ ದೇಶದ ಟಾಪ್ 50 ಉಪಕುಲಪತಿಗಳ ಪೈಕಿ ಪ್ರತಿಷ್ಠಿತ ‘2022 ರ ವರ್ಷದ ಉಪಕುಲಪತಿ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅವರು ತಮ್ಮ ವಿವಿಧ ಶೈಕ್ಷಣಿಕ ಚಟುವಟಿಕೆಗಳಿಗಾಗಿ ಮತ್ತು ಕೋವಿಡ್ 19 ಸಾಂಕ್ರಾಮಿಕದ ಸಮಯದಲ್ಲಿ ತೆಗೆದುಕೊಂಡ ಉಪಕ್ರಮಗಳಿಗಾಗಿ ಈ ಗೌರವ ಸಂದಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿದಿರುವ ಕುಲಪತಿಗಳು, ಈ ರಾಷ್ಟ್ರಪ್ರಶಸ್ತಿಯ ಶ್ರೇಯ ವಿಶ್ವವಿದ್ಯಾನಿಲಯ ಸಿಂಡಿಕೇಟ್, ಶೈಕ್ಷಣಿಕ ಪರಿಷತ್ತು, ಡೀನ್ಗಳು, ವಿವಿದ ಪೀಠಾಧಿಪತಿಗಳು, ಎಲ್ಲಾ ಆರು ಕಾಲೇಜುಗಳ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಸಂಶೋಧಕರು, ವಿದ್ಯಾರ್ಥಿಗಳು ಮತ್ತು ಕೊಡಗು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜನತೆಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು