News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಮುಕ್ತಾರ್ ಗೆ ಗುಂಡೇಟು

Mangaluru: Rowdy-sheeter Mukhtar shot dead while trying to escape from police custody
Photo Credit : News Kannada

ಮಂಗಳೂರು: ನಗರದ ಹೊರವಲಯದಲ್ಲಿ ಬೆಳಿಗ್ಗೆ ಗುಂಡಿನ ಸದ್ದು ಕೇಳಿಸಿದೆ. ಪ್ರಕರಣವೊಂದಕ್ಕೆ‌ ಸಂಬಂಧಿಸಿ ಸ್ಥಳ ತನಿಖೆಗೆ ಕರೆದೊಯ್ಯುತ್ತಿದ್ದ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಗೆ ಪೊಲೀಸಸರು ಫೈರಿಂಗ್ ನಡೆಸಿದ್ದಾರೆ.

ಈ ಘಟನೆ ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಅರೋಪಿಯನ್ನು ಬಂಧಿಸುವ ಯತ್ನದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಪೊಲೀಸ್ ಮೂಲಗಳ‌ ಪ್ರಕಾರ 14ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಮುಕ್ತಾರ್ ಎಂಬಾತ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಪ್ರಕರಣವೊಂದಕ್ಕೆ ಸಂಬಂಧಿಸಿ ಆತನನ್ನು ನಿನ್ನೆ ಆತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.

ಇಂದು ಮುಂಜಾನೆ ಮಹಜರಿಗೆಂದು ಕೊಣಾಜೆ ಸಮೀಪದ ಅಸೈಗೋಳಿಗೆ ಕರೆದೊಯ್ದಿದ್ದ ವೇಳೆ ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಠಾಣಾಧಿಕಾರಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡಿರುವ ಇಬ್ಬರು ಪೊಲೀಸ್ ಸಿಬಂದಿ ಹಾಗೂ ಆರೋಪಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದು, ಮಾಹಿತಿ ಸಂಗ್ರಹಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು