Categories: ಮಂಗಳೂರು

ಮಂಗಳೂರು: ಶಕ್ತಿ ವಿದ್ಯಾಸಂಸ್ಥೆಯಲ್ಲಿ ಈ ವರ್ಷದಿಂದ ಸಂಸ್ಕೃತ ಬೋಧನೆ ಪ್ರಾರಂಭ

ಮಂಗಳೂರು: ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿಅಗಸ್ಟ್ 13 ರಂದು ‘ ವಿಶ್ವ ಸಂಸ್ಕೃತ ದಿನ’ ಆಚರಣೆ ವಿಜ್ರಂಭಣೆಯಿಂದ ನೆರವೇರಿತು. ಸರಸ್ವತಿ ವಂದನೆಯಿಂದ ಆರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಹತ್ತನೇತರಗತಿಯಲ್ಲಿ ಸಂಸ್ಕೃತದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀನಿವಾಸ ಯುನಿವರ್ಸಿಟಿಯ ಸಂಸ್ಕೃತ ಸಂಶೋಧನಾ ವಿಭಾಗದ ಮುಖ್ಯಸ್ಥರಾದಡಾ। ಶಾಂತಲಾ ವಿಶ್ವಾಸ್ ಮಾತನಾಡಿ ಸಂಸ್ಕೃತ ಪ್ರಪಂಚದ ಅತ್ಯಂತ ಶ್ರೇಷ್ಠವಾದ ಭಾಷೆ. ಈ ಭಾಷೆಯನ್ನು ಕಲಿಯುವುದರಿಂದ ಶಾರೀರಿಕ ಹಾಗೂ ಮಾನಸಿಕ ದೃಢತೆಯನ್ನು ಸಾಧಿಸಬಹುದು, ಈ ಭಾಷೆಯಿಂದ ನಮ್ಮ ಉಚ್ಛಾರಣೆಯಲ್ಲಿ ಸ್ಪಷ್ಟತೆಯನ್ನು ಸಾಧಿಸಬಹುದು ಎಂದು ತಿಳಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್ ಕೆ ಇವರು ಸಂಸ್ಕೃತವನ್ನು ಎಲ್ಲರೂ ಕಲಿಯುವಂತಾಗಬೇಕು ಹಾಗೂ ಅದು ನಮ್ಮೆಲ್ಲರ ಭಾಷೆಯಾಗ ಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷರಾದ ಸಂಸ್ಥೆಯ ಸಂಸ್ಥಾಪಕರೂ ಹಾಗೂ ಆಡಳಿತಾಧಿಕಾರಿಗಳೂ ಆದಡಾ। ಕೆ.ಸಿ ನಾಯ್ಕ್ ಅವರು ಸಂಸ್ಕೃತ ಭಾಷೆ ಎಲ್ಲ ಭಾಷೆಗಳಿಗೆ ತಾಯಿಯ ಸ್ವರೂಪದಲ್ಲಿದೆ. ಶಕ್ತಿ ವಿದ್ಯಾ ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳೂ ಸಂಸ್ಕೃತ ಭಾಷೆಯನ್ನುಕಲಿಯಬೇಕು. ಆಧುನಿಕ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕೃತಿಯ ಮೂಲವಾದ ಸಂಸ್ಕೃತ ಭಾಷೆಯನ್ನು ನಾವೆಲ್ಲರೂ ಕಲಿಯಬೇಕಾಗಿದೆ. ಆ ಕಾರಣದಿಂದ ನಮ್ಮ ವಿದ್ಯಾಸಂಸ್ಥೆಯಲ್ಲಿ ‘ಎಲ್.ಕೆ.ಜಿ’ ಯಿಂದ 7ನೆ ತರಗತಿಯವರೆಗೆ ಸಂಸ್ಕೃತ ಭಾಷಾ ಕಲಿಕೆ ಆರಂಭಿಸಲು ಚಿಂತಿಸಲಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಶಕ್ತಿ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ  ಪೃಥ್ವಿರಾಜ ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ವಿದ್ಯಾಕಾಮತ್ ಉಪಸ್ಥಿತರಿದ್ದರು. ಪದವಿಪೂರ್ವ ವಿಭಾಗದ ಸಂಸ್ಕೃತ ಉಪನ್ಯಾಸಕ  ರವಿಶಂಕರ ಹೆಗಡೆ ನಿರೂಪಿಸಿದರು. ಶಕ್ತಿ ವಸತಿ ಶಾಲೆಯ ಸಂಸ್ಕೃತ ಶಿಕ್ಷಕಿ ಕೌಶಿಕಿ ಭಟ್ ಸ್ವಾಗತಿಸಿದರು. ಶಿಕ್ಷಕಿ ಮಾನಸ ಪ್ರಭು ವಂದಿಸಿದರು.

Gayathri SG

Recent Posts

ಯುವ ನವದಂಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಯುವ ನವ ದಂಪತಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ‌ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.

30 mins ago

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಾಯಿ ನಿಧನ

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ತಾಯಿ ಮಾಧವಿ ರಾಜೇ ಸಿಂಧಿಯಾ ದೆಹಲಿ ಏಮ್ಸ್‌ನಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲದಿನಗಳಿಂದ…

40 mins ago

ಪ್ರಬೀರ್ ಪುರಕಾಯಸ್ಥ ಬಂಧನ ಸರಿಯಾದ ಕ್ರಮವಲ್ಲ ಎಂದ ಸುಪ್ರೀಂ

ನ್ಯೂಸ್‌ ಕ್ಲಿಕ್‌ ಸುದ್ಧಿ ತಾಣದ ಸಂಸ್ಥಾಪಕರಾದ ಪ್ರಬೀರ್ ಪುರಕಾಯಸ್ಥ ಅವರನ್ನು ‘ಅಕ್ರಮ ಚಟುವಟಿಕೆ ತಡೆ ಕಾಯ್ದೆ’ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿತ್ತು…

45 mins ago

ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರು ಚಪ್ಪಲಿನಲ್ಲಿ ಹೊಡೆದಾಟ

ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ಘಟನೆ ಬೀದರ್‌ನಿಂದ ಕಲಬುರಗಿ ಬಸ್‌ನಲ್ಲಿ ಶಕ್ತಿ ಯೋಜನೆ ಅಡಿ ಉಚಿತ…

49 mins ago

ಹುಟ್ಟು ಹಬ್ಬದ ಸಂಭ್ರಮದಲ್ಲಿ ʼದಿಲ್ ತೋ ಪಾಗಲ್ ಹೈʼ ನಟಿ ಮಾಧುರಿ ದೀಕ್ಷಿತ್

ಬಾಲಿವುಡ್ ಚಿತ್ರರಂಗದ ಜನಪ್ರಿಯ ನಟಿ ಮಾಧುರಿ ದೀಕ್ಷಿತ್ ಇಂದು ತಮ್ಮ 57ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.  ಚಿತ್ರರಂಗದಲ್ಲಿ ನಟಿ ಮಾಧುರಿ…

59 mins ago

ಮೋದಿ ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದ ಅಮಿತ್‌ ಶಾ

ಮೋದಿ  ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

1 hour ago