Categories: ಮಂಗಳೂರು

ಮಂಗಳೂರು: ಬಾಲಗೋಕುಲದಿಂದ ಎಳೆಯರಲ್ಲಿ ಸಂಸ್ಕಾರ ಜಾಗೃತಿ – ಡಾ.ಭರತ್‌ ಶೆಟ್ಟಿ

ಮಂಗಳೂರು: ಹಿಂದೂ ಸಂಸ್ಕೃತಿ ಸಂಸ್ಕಾರಗಳನ್ನು ಎಳೆಯರ ಮನಸ್ಸಿನಲ್ಲಿ ಮೂಡುವಂತೆ ಪ್ರೆರೇಪಿಸುವ ಶಿಕ್ಷಣ ಬಾಲಗೋಕುಲ ಕೇಂದ್ರಗಳಲ್ಲಿ ಸಿಗುತ್ತದೆ. ಉತ್ಕ್ರಷ್ಟ ಭಾರತೀಯ ಪರಂಪರೆಯ ನಡವಳಿಕೆ ಸಮಾಜವನ್ನು ಒಗ್ಗೂಡಿಸುತ್ತದೆ. ಒಡೆದು ಆಳುವ ನೀತಿಗೆ ನಾವು ಚದುರಬಾರದು. ಸಾಂಘಿಕ ಶಕ್ತಿಯಾಗಿ ಪ್ರೀತಿ ಗೌರವಗಳ ಅಮೃತ ಭಾವನೆಯಿಂದ ಸಮಾಜದಲ್ಲಿ ಶಕ್ತಿಶಾಲಿ ಹಿಂದೂ ಸಮಾಜವಾಗಬೇಕು ಎಂದು ಶಾಸಕ ಭರತ್‌ ಶೆಟ್ಟಿ ಹೇಳಿದರು.

ಶ್ರೀ ರಾಮ ಯುವಕ ಸಂಘ ಪ್ರಾಯೋಜಿಸಿದ ಶ್ರೀ ರಾಮ ಬಾಲಗೋಕುಲದ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು. ಜಾತಿ ವೈಷಮ್ಯಗಳು ವಿನಾಶಕಾರಿ ಪ್ರವೃತ್ತಿಯಾಗುತ್ತದೆ. ಸದೃಢ ಹಿಂದೂ ಸಮಾಜ ನಿರ್ಮಾಣಕ್ಕೆ ಎಲ್ಲರೂ ಒಂದಾಗಬೇಕು. ದ್ವೇಷ ಏನನ್ನೂ ಸಾಧಿಸದು.

ಪ್ರೀತಿ ಸಾಧನೆಯ ಪ್ರತೀಕ ನಾವೆಲ್ಲಾ ಪ್ರೀತಿಯಿಂದ ಬಾಳೋಣ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಮಾನಯಾನ ಇಲಾಖೆಯ ಉಪ ನಿರ್ದೇಶಕ ರಾದ ಜಗದೀಶ್ ಬಳ್ಳಾಲಬೈಲ್ ಶುಭಾಶಯಗಳು ಹಾರೈಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜನಾರ್ದನ ಗೌಡ ಮುಚ್ಚೂರು ಪ್ರಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಆನಂದ್ ಮಿಜಾರ್, ಶಕ್ತಿಕೇಂದ್ರದ ಅಧ್ಯಕ್ಷ ಗೋಪಾಲ್ ಕಂದಲಬೆಟ್ಟು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ರೂಪೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಬಾಲಗೋಕುಲದ ಮಾತಾಜಿಯವರಾದ ಸರಿತಾ ಮಾಲತಿ, ಧನ್ಯ, ಪೂಜಾ, ಚಂದ್ರಿಕಾ, ದಿವ್ಯಾ ನಿರ್ವಹಣೆಗೈದರು. 116 ಮಂದಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.

Ashika S

Recent Posts

ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

1 min ago

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

20 mins ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

38 mins ago

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು…

50 mins ago

ಅನಿಮೇಟೆಡ್ ವಿಡಿಯೋ ‘ತಕ್ಷಣ’ ತೆಗೆದುಹಾಕುವಂತೆ ಬಿಜೆಪಿಗೆ ಚುನಾವಣಾ ಆಯೋಗ ಆದೇಶ

ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ…

1 hour ago

13 ವರ್ಷದ ಬಾಲಕಿ ಜೊತೆ 70ರ ವೃದ್ಧ ಮದುವೆ: ತಂದೆ, ವರ ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯನ್ನು  70 ವರ್ಷದ ವ್ಯಕ್ತಿ ಮದುವೆಯಾಗಿದ್ದಕ್ಕಾಗಿ ಪೊಲೀಸರು ಬಂಧಿಸಿದ ಘಟನೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

2 hours ago