ಮಂಗಳೂರು

ಮಂಗಳೂರು: ಸರಣಿ ಕೊಲೆ ಪ್ರಕರಣಕ್ಕೆ ಮುಖ್ಯಮಂತ್ರಿಗಳೇ ಕಾರಣ ಎಂದ ಎಸ್ ಡಿ ಪಿ ಐ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆ ಪ್ರಕರಣ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರೇ ಪ್ರಮುಖ ಆರೋಪಿ ಹೀಗಾಗಿ ತಕ್ಷಣ ಸಿಎಂ ಬೊಮ್ಮಾಯಿ ರಾಜಿನಾಮೆ ನೀಡಬೇಕು ಎಂದು ಎಸ್ ಡಿ ಪಿ ಐ ರಾಜ್ಯ ಸಮಿತಿಯ ಆಗ್ರಹಮಾಡಿದೆ.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಸುದ್ದಿ ಗೋಷ್ಠಿ ನಡೆಸಿದ ಆಥಾವುಲ್ಲಾ ಜೋಕಟ್ಟೆ ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂಬ ಸಿಎಂ ಹೇಳಿಕೆಯ ಬಳಿಕ ಜಿಲ್ಲೆಯಲ್ಲಿ ಅಶಾಂತಿ ಸೃಷ್ಠಿಯಾಗಿದೆ. ಸರ್ಕಾರದ ಹಗರಣಗಳ ದಿಕ್ಕು ತಪ್ಪಿಸಲು ಗಲಭೆ ಸೃಷ್ಟಿಸುವ ಹುನ್ನಾರ ಮಾಡಿದ್ದಾರೆ.

ಜಿಲ್ಲೆಯಲ್ಲಿ ನಡೆದ ಎಲ್ಲಾ ಕೊಲೆಗಳ ನಿಷ್ಪಕ್ಷಪಾತವಾಗಿ ತನಿಕೆಯಾಗಲಿ. ಪರಿಹಾರದ ವಿಚಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ ಇದು ಸರಿ ಅಲ್ಲ ಎಂದರು.

ಪ್ರಕರಣಗಳನ್ಬು ಎನ್ ಐಎ ಗೆ ನೀಡುವುದಾದರೆ ಎಲ್ಲ ಪ್ರಕರಣಗಳನ್ನು ನೀಡಲಿ,ಒಂದು ಸಮುದಾಯಕ್ಕೆ ಒಂದು ನ್ಯಾಯ ಮಾಡುವುದು ಬೇಡ ಎಲ್ಲರಿಗೂ ಒಂದೇ ನ್ಯಾಯ ಸಿಗಲಿ.ಪ್ರವೀಣ್ ಮನೆಗೆ ಹೋದವರಿಗೆ ಮಸೂದ್ ,ಫಾಸಿಲ್ ಮನೆ ಕಾಣುತ್ತಿಲ್ಲವೇ? ಈ ರೀತಿಯ ನಡವಳಿಕೆಯಿಂದ ಒಂದು ಸಮೂದಾಯ ಹತಾಶೆಗೆ ಒಳಗಾಗಬಹುದು ಎಂದರು.

Ashika S

Recent Posts

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

14 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

30 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

60 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago