Categories: ಮಂಗಳೂರು

ಮಂಗಳೂರು: ಸ್ವಚ್ಛತೆಯ ಬಗ್ಗೆ ಸ್ವಯಂ ಜಾಗೃತಿ ಅಗತ್ಯ -ಅಕ್ಷಯ್ ಶ್ರೀಧರ್

ಮಂಗಳೂರು, ಜ.7: ಸಾರ್ವಜನಿಕ ಸ್ಥಳಗಳಲ್ಲಿ ಸ್ವಯಂ ಸ್ವಚ್ಛತಾ ಜಾಗೃತಿ ನಗರದ ಸ್ವಚ್ಛತೆ ಗೆ ಪೂರಕ ಎಂದು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.

ಭಾರತೀಯರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕ , ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಸಹಭಾಗಿತ್ವದಲ್ಲಿ ನಗರದ ಮನಪಾ ಕಚೇರಿ ಬಳಿಯ ಬಸ್ ತಂಗುದಾಣ ದ ಸ್ವಚ್ಛ ಸುಂದರ ಮಂಗಳೂರು ಕಾರ್ಯಕ್ರಮ ವನ್ನುದ್ದೇಶಿಸಿ ಅವರು ಇಂದು ಮಾತನಾಡುತ್ತಿದ್ದರು.

ನಮ್ಮ ನಗರವನ್ನು ನಾವೇ ಸ್ವಚ್ಛ ವಾಗಿಡ ಬೇಕು ಎಂದು ಯುವ ಜನರಲ್ಲಿ ವಿದ್ಯಾರ್ಥಿ ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಸ್ವಯಂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದಲ್ಲಿ ಬಸ್ ತಂಗುದಾಣಗಳ ಸ್ವಚ್ಛತೆ, ಗಿಡ ನೆಡುವ ಕಾರ್ಯ ಕ್ರಮಗಳು ಮಾದರಿಯಾಗಿದೆ ಎಂದು ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.

ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ರಾಜ್ಯ ಮಾಧ್ಯಮ ಅಕಾಡೆಮಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಪ್ರತಿನಿಧಿಗಳಾದ ರವೀಂದ್ರನಾಥ ಉಚ್ಚಿಲ್,ಪತ್ರಕರ್ತರ ರಾಷ್ಟ್ರೀಯ ಒಕ್ಕೂಟದ ಕಾರ್ಯ ಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ,ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ,ಕಾರ್ಯಕಾರಿ ಸಮಿತಿ ಸದಸ್ಯ ರಾದ ರಾಜೇಶ್ ದೊಡ್ಡಂಗಡಿ,ಶ್ರವಣ್ ಕುಮಾರ್ ನಾಳ ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನಿರ್ದೇಶಕಿ ದೀಕ್ಷಿತಾ, ಸಹ ಸಂಯೋಜಕರಾದ ಸ್ವಾತಿ, ಕೀರ್ತಿ ಹಾಗೂ ಕಾರ್ಯದರ್ಶಿ ಶ್ರೀಜಾ ಉಪ ಸ್ಥಿತರಿದ್ದರು.

ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿನಿಯರು ಮಂಗಳೂರು ಮಹಾನಗರ ಪಾಲಿಕೆಯ ಬಸ್ ತಂಗುದಾಣ ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Gayathri SG

Recent Posts

ಎಮ್.ಎಲ್.ಸಿ ಟಿಕೆಟ್ ಹಂಚಿಕೆ ಬಿಜೆಪಿಯಲ್ಲಿ ಬಂಡಾಯದ ಬಿಸಿ

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಬಿಜೆಪಿ‌ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ.ಪಂ‌ ಮಾಜಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ಸುರೇಶ ಸಜ್ಜನ್ ಟಿಕೆದ…

5 mins ago

ಎನ್‌ಸಿಪಿ ರದ್ದತಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಬಿವಿಪಿ ಪ್ರತಿಭಟನೆ

ರಾಜ್ಯ ಸರ್ಕಾರವು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದು ಎಂದು ಒತ್ತಾಯಿಸಿ ಅಖಿಲ ಭಾರತೀಯ…

8 mins ago

ವರುಣನ ಆರ್ಭಟ : ಮಲೆ ಮಹದೇಶ್ವರ ಬೆಟ್ಟದ ಮಜ್ಜನ ಬಾವಿಯೇ ಮುಳುಗಡೆ, ನೀರು ಕಲುಷಿತ..!

ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿವರ್ಷದಂತೆ ಈ ವರ್ಷವೂ, ಮಳೆಗಾಲದಲ್ಲಿ ಜೋರು ಮಳೆ ಬಂದರೆ ಪ್ರತಿ ಬಾರಿಯೂ…

17 mins ago

ಲಖನೌ ವಿರುದ್ಧದ ಪಂದ್ಯದ ಬಳಿಕ​ ಶಾಕಿಂಗ್​ ಹೇಳಿಕೆ ಕೊಟ್ಟ ರಿಷಭ್​

ಅರುಣ್​ ಜೇಟ್ಲಿ ಕ್ರೀಡಾಂಗನದಲ್ಲಿ ನಡೆದ 17ನೇ ಆವೃತ್ತಿಯ 64ನೇ ಐಪಿಎಲ್​ ಪಂದ್ಯದಲ್ಲಿ ಆಲ್ರೌಂಡ್​ ಪ್ರದರ್ಶನದ ಫಲವಾಗಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವು…

21 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ರಾಜಧಾನಿಯ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಪ್ರತಿಷ್ಠಿತ ಪಿಇಎಸ್ ಯೂನಿವರ್ಸಿಟಿಯಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

33 mins ago

ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ಭಾರತೀಯ ಮೂಲದ 66ವರ್ಷದ ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ವಾಯುವ್ಯ ಲಂಡನ್‌ ನ ಬಸ್‌ ನಿಲ್ದಾಣದಲ್ಲಿ ನಡೆದಿರುವುದಾಗಿ ವರದಿ…

33 mins ago