News Karnataka Kannada
Saturday, May 11 2024
ಮಂಗಳೂರು

ಮಂಗಳೂರು: ಸೆ.21ರಂದು ಪತ್ರಕರ್ತರಿಗೆ ಸ್ವ ಉದ್ಯೋಗ ಮಾಹಿತಿ ಶಿಬಿರ

Mangaluru: Self-employment awareness camp for journalists to be held on September 21
Photo Credit : Freepik

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತೋಟಗಾರಿಕಾ ಇಲಾಖೆ, ಮೀನುಗಾರಿಕಾ ಇಲಾಖೆ ಮತ್ತು ಪಶು ಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಸ್ವ ಉದ್ಯೋಗ ಮಾಹಿತಿ ಶಿಬಿರ ಸೆ.21 (21-09-2022 ) ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಬೆಂದೂರ್ ವೆಲ್ ನಲ್ಲಿರುವ ತೋಟಗಾರಿಕಾ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್. ಆರ್.ನಾಯ್ಕ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ.

ಪತ್ರಕರ್ತರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಜೇನು ಕೃಷಿ, ಅಣಬೆ ಕೃಷಿ, ಹೈನುಗಾರಿಕೆ, ಕೋಳಿ ಸಾಕಣೆ, ಮೀನುಗಾರಿಕೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು