News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಶ್ರೀ ಗೋಕರ್ಣನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ

Mangaluru: Siddaramaiah visits Sri Gokarnanatha Swamy Temple and offers prayers
Photo Credit : News Kannada

ಮಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜನವರಿ 5 ರಂದು ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಯು.ಟಿ. ಖಾದರ್ ಮತ್ತಿತರರು ಹಾಜರಿದ್ದರು.

ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಸ್ವಾಮಿಯವರು ಮಂಗಳೂರಿನಲ್ಲಿ  ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈಡಿಗ ಬಿಲ್ಲವ ನಾಮಧಾರಿಗಳ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವಂತೆ ಮನವಿ ಮಾಡಿದರು.

ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿ  ಉಡುಪಿ ಜಿಲ್ಲೆಯ ಪಕ್ಷದ ಮುಖಂಡರ ಜೊತೆ ಮಾತುಕತೆ ನಡೆಸಿದರು. ‌

ಮಂಗಳೂರಿನ ಬಿಕರ್ನಕಟ್ಟೆ ಬಾಲ ಯೇಸು ಚರ್ಚ್ ಗೆ  ಸಿದ್ದರಾಮಯ್ಯ ಅವರು  ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಐವಾನ್ ಡಿಸೋಜಾ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು