News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಜುಲೈ 1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಲಾಗುವುದು

Mangaluru: Single use plastic products to be banned from July 1
Photo Credit : Freepik

ಮಂಗಳೂರು: ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ ಎಫ್ಇಇ 17 ಇಪಿಸಿ 2012, ದಿನಾಂಕ: 11.03.2016 ರನ್ವಯ ಕೆಳಗಿನ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು 11.03.2016 ರಿಂದ ಈಗಾಗಲೇ ನಿಷೇಧಿಸಲಾಗಿದೆ.

ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್ಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ ಗಳು, ಪ್ಲಾಸ್ಟಿಕ್ ಸ್ಪೂನ್ ಗಳು, ಅಂಟಿಕೊಳ್ಳುವ ಫಿಲ್ಮ್ ಗಳು, ಎಲ್ಲಾ ದಪ್ಪದ ಡೈನಿಂಗ್ ಟೇಬಲ್ ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾ ಗಳು, ಥರ್ಮಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ನಿಷೇಧಿಸಲಾಗರುತ್ತದೆ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEF ಮತ್ತು CC) ನವದೆಹಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳು, 2021 ರಲ್ಲಿ ಮೇಲಿನ ನಿಷೇಧಿತ ಉತ್ಪನ್ನಗಳ ಜೊತೆಗೆ ಕೆಳಗಿನ ಹೆಚ್ಚುವರಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು 1ನೇ ಜುಲೈ 2022 ರಿಂದ ಜಾರಿಗೆ ಬರುವಂತೆ ನಿಷೇಧಿಸಿ ದಿನಾಂಕ 12ನೇ ಆಗಸ್ಟ್, 2021 ರಂದು ಅಧಿಸೂಚನೆ (G.S.R.No.571 (E)) ಯನ್ನು ಹೊರಡಿಸಿದೆ.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016ರ ನಿಯಮ 4(2) ರ ಪ್ರಕಾರ (ತಿದ್ದುಪಡಿಯಂತೆ).
” ಪಾಲಿಸೈರೀನ್ ಮತ್ತು ವಿಸ್ತರಿತ ಪಾಲಿಸೈರೀನ್ ಸೇರಿದಂತೆ ಕೆಳಗಿನ ಏಕ ಬಳಕೆಯ ಪ್ಲಾಸ್ಟಿಕ್ (SUP) ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಜುಲೈ 1, 2022 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

(ಎ) ಪ್ಲಾಸ್ಟಿಕ್ ಸ್ಟಿಕ್ ಗಳೊಂದಿಗೆ ಇಯರ್ ಬಡ್ ಗಳು, ಬಲೂನು ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್ ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್ ಗಳು, ಪ್ಲಾಸ್ಟಿಕ್ ಐಸ್ ಕ್ರೀಮ್ ಸ್ಟಿಕ್ ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸೈರೀನ್ (ಥರ್ಮಕೋಲ್).
(ಬಿ) ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಕಪ್ ಗಳು ಮತ್ತು ಲೋಟಗಳು ಫೋರ್ಕ್ ಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಪ್ಲಾಸ್ಟಿಕ್ ಟ್ರೇ ಗಳಂತಹ ಕಟ್ಲರಿಗಳು, ಸ್ವೀಟ್ ಬಾಕ್ಸ್ ಗಳ ಸುತ್ತ ಸುತ್ತುವ ಅಥವಾ ಪ್ಯಾಕಿಂಗ್ ಫಿಲ್ಮ್ ಗಳು, ಆಮಂತ್ರಣ ಪತ್ರಗಳು ಮತ್ತು ಸಿಗರೇಟ್ ಪ್ಯಾಕೆಟ್ ಗಳು, 100 ಮೈಕ್ರಾನ್ ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಅಥವಾ PVC ಬ್ಯಾನರ್ ಗಳು, ಪ್ಲಾಸ್ಟಿಕ್ ಸ್ಟಿರರ್ ಗಳು.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ (MoEF ಮತ್ತು CC) ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ಟೈಮ್ ಲೈನ್ ಗಳ ಪ್ರಕಾರ ಮೇಲಿನ ಎಲ್ಲಾ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪಾರಿಗಳು, ಅಂಗಡಿ ಮಾಲೀಕರುಗಳು, ಇ-ಕಾಮರ್ಸ್ ಕಂಪನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು( ಮಾಲ್ ಗಳು/ ಮಾರುಕಟ್ಟೆ ಸ್ಥಳ/ ಶಾಪಿಂಗ್ ಕೇಂದ್ರಗಳು/ ಸಿನಿಮಾ ಮನೆಗಳು/ ಪ್ರವಾಸೋದ್ಯಮ ಸ್ಥಳಗಳು/ ಶಾಲೆಗಳು/ ಕಾಲೇಜುಗಳು, ಕಛೇರಿ ಸಂಕೀರ್ಣಗಳು/ ಆಸ್ಪತ್ರೆಗಳು, ಇತರೆ ಸಂಸ್ಥೆಗಳು) ಮತ್ತು ಸಾರ್ವಜನಿಕರಿಗೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಲ್ಲಿಸುವಂತೆ ತಿಳಿಸಲು ಈ ಸೂಚನೆಯನ್ನು ನೀಡಲಾಗಿದೆ.

ಇದಲ್ಲದೆ, ಜೂನ್ 30, 2022 ರೊಳಗೆ ಮೇಲೆ ತಿಳಿಸಲಾದ ಎಸ್ ಯು ಪಿ ವಸ್ತುಗಳ ಶೂನ್ಯ ದಾಸ್ತಾನುಗಳನ್ನು ಖಚಿತಪಡಿಸಿಕೊಳ್ಳಲು ಸಂಬಂಧಿಸಿದ ಘಟಕಗಳಿಂದ ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು ಎಲ್ಲಾ ಇ-ಕಾಮರ್ಸ್ ಕಂಪನಿಗಳ ವೆಬ್ ಸೈಟ್ ನಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಜಾಹೀರಾತುಗಳನ್ನು ಕೂಡ ಜುಲೈ 1, 2022 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

ಮೇಲಿನ ಆದೇಶವನ್ನು ಕೈಗಾರಿಕೆಗಳು ವಾಣಿಜ್ಯ ಸಂಸ್ಥೆಗಳಾದ ಮಾಲ್ ಗಳು/ ಮಾರುಕಟ್ಟೆ ಸ್ಥಳ/ ಶಾಪಿಂಗ್ ಕೇಂದ್ರಗಳು/ ಸಿನಿಮಾ ಮನೆಗಳು/ ಪ್ರವಾಸಿ ಸ್ಥಳಗಳು/ ಶಾಲೆಗಳು/ ಕಾಲೇಜುಗಳು/ ಕಚೇರಿಗಳು/ ಆಸ್ಪತ್ರೆಗಳು ಮತ್ತು ಇತರ ಸಂಸ್ಥೆಗಳು ಉಲ್ಲಂಘಿಸಿದರೆ ಪರಿಸರ (ಸಂರಕ್ಷಣೆ) ಕಾಯ್ದೆ, 1986 ರಡಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ವಶಪಡಿಸಿಕೊಳ್ಳುವ ಮತ್ತು ಮುಚ್ಚುವ ಆದೇಶವನ್ನು ನೀಡಲಾಗುವುದು ಹಾಗೂ ಪಾಲಿಕೆಯ ಎಸ್ ಡಬ್ಲ್ಯೂ ಎಂ ಮತ್ತು ನೈರ್ಮಲ್ಯ ಉಪನಿಯಮಗಳಡಿ ದಂಡ ವಿಧಿಸಲಾಗುವುದು ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಹೊರಡಿಸಿದ ಮಾರ್ಗಸೂಚಿಯ ಪ್ರಕಾರ ಪರಿಸರ ಪರಿಹಾರವನ್ನು ಪ್ರತಿ ಟನ್ ಗೆ ರೂ. 5000/- ವನ್ನು ದಂಡ ವಿಧಿಸಲಾಗುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು