Categories: ಮಂಗಳೂರು

ಮಂಗಳೂರು: ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾದೀಶರಾಗಿ ಸಿರಾಜುದ್ದೀನ್ ಎ. ಆಯ್ಕೆ

ಮಂಗಳೂರು: ಮಂಗಳೂರಿನ ನ್ಯಾಯಾವಾದಿ ಸಿರಾಜುದ್ದೀನ್ ಎ. ಅವರು 2022ರ ಸಾಲಿನ ನೇರ ನೇಮಕಾತಿಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.

ಕಳೆದ 16 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮಂಗಳೂರಿನ ಖ್ಯಾತ ನ್ಯಾಯಾವಾದಿಗಳಾದ ಅರುಣ್ ಬಂಗೇರ ಮತ್ತು ಅರುಣ್ ಕುಮಾರ್ ಶೆಟ್ಟಿಯವರ ಜೂನಿಯರ್ ನ್ಯಾಯಾವಾದಿಯಾಗಿ ಗುರುತಿಸಿಕೊಂಡಿದ್ದರು.

ಮೂಲತ: ಬೆಳ್ತಂಗಡಿ ತಾಲೂಕಿನವರಾದ ಇವರು ಇಳಂತಿಲದ ಇದ್ದಿನಬ್ಬ ಬ್ಯಾರಿ ಮತ್ತು ಮೈಮುನ ದಂಪತಿಗಳ ಸುಪುತ್ರರಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜ್ ನಲ್ಲಿ ಕಾನೂನು ಪದವಿ ಪಡೆದ ಇವರು ಮಡಂತ್ಯಾರ್ ನ ಸೆಕ್ರೆಡ್ ಹಾರ್ಟ್ ಕಾಲೇಜ್ ನಲ್ಲಿ ಬಿ. ಎ. ಡಿಗ್ರಿ ಓದಿದ್ದರು. ಪದ್ಮುಂಜದ ಸರಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಪಿಯುಸಿ ಓದಿದ ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉರುವಲುನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪಡೆದಿದ್ದಾರೆ. ಇವರು ಮಂಗಳೂರು ಬಾರ್ ಅಸೋಸಿಯೇಶನ್ ನ ಸದಸ್ಯರಾಗಿದ್ದಾರೆ.

Gayathri SG

Recent Posts

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

6 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

19 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

19 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

45 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

1 hour ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago