News Karnataka Kannada
Wednesday, May 01 2024
ಮಂಗಳೂರು

ಮಂಗಳೂರು: ಕೊಂಕಣಿ ಸಾಹಿತ್ಯ ಪ್ರಶಸ್ತಿಗೆ ಶ್ರೀಮತಿ ಐರಿನ್ ಪಿಂಟೊ ಆಯ್ಕೆ

Mangaluru: Smt. Irene Pinto selected for Konkani Literary Award
Photo Credit : News Kannada

ಮಂಗಳೂರು: ಕೊಂಕಣಿ ಲೇಖಕ ಸಂಘ ಕರ್ನಾಟಕ ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿ ಆರಂಭಗೊಂಡಿತು. 2022ರಲ್ಲಿ ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರನ್ನು ಆಯ್ಕೆ ಮಾಡಿ ಗೌರವಿಸಲು ಕೊಂಕಣಿ ಲೇಖಕ ಸಂಘ ನಿರ್ಧರಿಸಿತು.

ಅದರಂತೆ, ಕೊಂಕಣಿ ಲೇಖಕ ಸಂಘದ ಪ್ರಶಸ್ತಿ ಸಮಿತಿಯು ಖ್ಯಾತ ಕೊಂಕಣಿ ಲೇಖಕಿ ಶ್ರೀಮತಿ ಐರಿನ್ ಪಿಂಟೊ ಅವರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ. ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

2023ರ ಫೆಬ್ರಬರಿ 25ರಂದು ಸಂಜೆ 6.30ಕ್ಕೆ ಮಂಗಳೂರು ನಂತೂರಿನ, ಬಜೋಡಿಯ ಸಂದೇಶ ಪ್ರತಿಷ್ಠಾನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ‘ರಾ’ ಕೊಂಕಣಿ ವಾರಪತ್ರಿಕೆಯ ಮಾಜಿ ಸಂಪಾದಕರಾದ ಫಾದ‌ ಫ್ರಾನ್ಸಿಸ್ ಭಾಗವಹಿಸಲಿದ್ದು, ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಡಾ| ರಾಧಾಕೃಷ್ಣ ಎನ್‌. ಬೆಳ್ಳೂರ್
ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು