ಮಂಗಳೂರು: ಪರ ಸ್ತ್ರೀ ಜೊತೆ ತಂದೆಯ ದೈಹಿಕ ಸಂಪರ್ಕದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ತಾಲೂಕಿನಲ್ಲಿ ನಡೆದಿದೆ.
ಸ್ಥಳೀಯ ಯುವಕನೊಬ್ಬನ ತಂದೆ ಪರಸ್ತ್ರೀಯೊಂದಿಗೆ ದೈಹಿಕ ಸಂಪರ್ಕ ಮಾಡುವ ವೇಳೆ ಜಯಕುಮಾರ್ ಎಂಬಾತ ವಿಡಿಯೋ ಮಾಡಿದ್ದ. ಈ ವಿಡಿಯೋವನ್ನು ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಇದರಿಂದ ಇಳಿ ವಯಸ್ಸಿನ ಮಹಿಳೆ, ಯುವಕನ ತಂದೆ ಹಾಗೂ ಯುವಕ ಮುಜುಗರ ಅನುಭವಿಸಿದ್ದರು. ಅಲ್ಲದೆ ಯುವಕ ತಂದೆಯೊಂದಿಗೆ ಇದೇ ವಿಚಾರವಾಗಿ ಜಗಳವಾಡಿದ್ದ ಎನ್ನಲಾಗಿದೆ. ಅಲ್ಲದೆ ಜಾಲತಾಣಗಳಲ್ಲಿ ವಿಡಿಯೋ ಹರಿದಾಡಿದ ಕಾರಣ ತೀವ್ರ ಮುಜುಗರ, ಮಾನಸಿಕ ವೇದನೆ ಅನುಭವಿಸಿದ್ದ ಎನ್ನಲಾಗಿದೆ. ಇದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ವಿಡಿಯೋ ವೈರಲ್ ಮಾಡಿದ ಜಯಕುಮಾರ್ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.