ಮಂಗಳೂರು

ಮಂಗಳೂರು: ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ- ಡಾ.ರಾಜೇಂದ್ರ ಕೆ.ವಿ.

ಮಂಗಳೂರು: ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದರು.

ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ, ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಮಂಗಳೂರು ಮಹಾನಗರ ಪಾಲಿ ಕೆಯ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿ ರುವ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯವನ್ನು ನಗರದ ಸಂತ ಅಲೋಶಿಯಸ್ ಕಾಲೇಜು ಮೈದಾನದಲ್ಲಿ ಭಾನುವಾರ ಉದ್ಘಾಟಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು, ಪತ್ರ ಕರ್ತರು ಸಾಕಷ್ಟು ಒತ್ತಡ ಗಳ ನಡುವೆ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸೌಹಾರ್ದ ಕ್ರಿಕೆಟ್ ನಂತಹ ಚಟುವಟಿಕೆಗಳು ಸಹಕಾರಿ. ಜಿಲ್ಲೆಯಲ್ಲಿ ಸೌಹಾರ್ದ ಮೂಡಿಸುವ ನಿಟ್ಟಿನ ಬ್ರ್ಯಾಂಡ್ ಮಂಗಳೂರು ಪರಿಕಲ್ಪನೆ ಮಾದರಿಯಾಗಿದೆ ಎಂದರು.

ಉದ್ಘಾಟನಾ ಕಾರ್ಯಕ್ರಮದಲ್ಲಿಮುಖ್ಯ ಅತಿಥಿಗಳಾಗಿ ಮಂಗಳೂರು ಪೊಲೀಸ್ ಆಯುಕ್ತ ಶಶಿ ಕುಮಾರ್ ಮಾತನಾಡುತ್ತಾ, ದ.ಕ ಜಿಲ್ಲೆ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದೆ ಜೊತೆಗೆ ಪ್ರವಾಸೋದ್ಯಮ ದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಅಭಿವೃದ್ಧಿ ಪಡಿಸಲು ಅವಕಾಶವಿದೆ ಎಂದು ಶುಭ ಹಾರೈಸಿದರು.

ಮಂಗಳೂರು ಮಂಗಳ ಗಂಗೋತ್ರಿ ವಿಶ್ವ ವಿದ್ಯಾನಿ ಲಯ ಕುಲಪತಿ ಪ್ರೊ.ಪಿ.ಎಸ್. ಯಡಪಡಿ ತ್ತಾಯ, ಅಪರ ಜಿಲ್ಲಾ ಧಿಕಾರಿ ಕೃಷ್ಣ ಮೂರ್ತಿ, ರೋಹನ್ ಕಾರ್ಪೊರೇಶನ್ ಮಂಗಳೂರು ಇದರ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು.

ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಅಧ್ಯಕ್ಷ ತೆ ವಹಿಸಿದ್ದರು. ಹಿರಿಯ ಪತ್ರ ಕರ್ತರಾದ ಮನೋಹರ ಪ್ರಸಾದ್ ಪದಾಧಿಕಾರಿ ಗಳಾದ ಜಗನ್ನಾಥ ಶೆಟ್ಟಿ ಬಾಳ, ಹರೀಶ್ ರೈ,ಆರಿಫ್ ಪಡುಬಿದ್ರೆ, ಪುಷ್ಪ ರಾಜ್ ಬಿ.ಎನ್, ಭಾಸ್ಕರ ರೈ ಕಟ್ಟ, ರಾಜೇಶ್ ಪೂಜಾರಿ, ಭರತ್ ರಾಜ್, ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು. ಪತ್ರ ಕರ್ತರ ಸಂಘದ ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.

ವಿವಿ ತಂಡಕ್ಕೆ ಬ್ರ್ಯಾಂಡ್ ಮಂಗಳೂರು ಟ್ರೋಫಿ:
ಬ್ರ್ಯಾಂಡ್ ಮಂಗಳೂರು ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಂಗಳೂರು ವಿವಿ ತಂಡ ಟ್ರೋಫಿ ಜಯಿಸಿದೆ. ಎಂಸಿಸಿ ತಂಡ ರನ್ನರ್ಸ್ ಅಪ್ ಪಡೆಯಿತು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಬಹುಮಾನ ವಿತರಿಸಿದರು.
ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಭಾರತೀಯ ಪತ್ರಕರ್ತರ ಒಕ್ಕೂಟ ದ ಕಾರ್ಯಕಾರಿ ಸದಸ್ಯ ಪಿ.ಬಿ.ಹರೀಶ್ ರೈ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಇದ್ದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago