News Karnataka Kannada
Sunday, May 12 2024
ಮಂಗಳೂರು

ಮಂಗಳೂರು: ಆ.19ರಂದು ಶ್ರೀ ಕೃಷ್ಣ ಜಯಂತಿ ಆಚರಣೆ

Mangaluru: Sri Krishna Jayanthi to be celebrated on August 19
Photo Credit :

ಮಂಗಳೂರು,ಆ.16(ಕ.ವಾ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಸರ್ಕಾರಿ ನೌಕರರ ಸಂಘದ ನಂದಿನಿ ಸಭಾ ಭವನದಲ್ಲಿ ಆ.19ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಶ್ರೀ ಕೃಷ್ಣ ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿದೆ.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಗೌರವ ಉಪಸ್ಥಿತಿ ವಹಿಸುವರು.

ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭೆಯ ಸಂಸದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ. ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೆಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಮೇಯರ್ ಪ್ರೇಮಾನಂದ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಜಗದೀಶ್ ಪೈ, ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಕ್ರಿಶ್ಚನ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಜೋಯ್ಲಸ್ ಡಿ’ಸೋಜ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಭಾಗವಹಿಸುವರು.

ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ. ನರಸಿಂಹ ಮೂರ್ತಿ ರಾವ್ ಶ್ರೀ ಕೃಷ್ಣ ಜಯಂತಿಯ ಸಂದೇಶ ನೀಡಲಿದ್ದಾರೆ.

Photo credit – Wikimedia

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು