ಮಂಗಳೂರು: ಯುವ ನಾಯಕ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಮುಖಂಡ, ಅಲೆಮಾರಿ-ಅರೆ ಅಲೆಮಾರಿ ಅಭಿವೃದ್ದಿ ನಿಗಮದ ನಿಕಟಪೂರ್ವ ಅಧ್ಯಕ್ಷ ಕೆ ರವೀಂದ್ರ ಶೆಟ್ಡಿ ಉಳಿದೊಟ್ಟು ಇವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಾಮೂಹಿಕವಾಗಿ ದೇವರಿಗೆ ಪೂಜೆ ಸಲ್ಲಿಸಿದರು.
ಯುವ ನಾಯಕ ವಿಜಯೇಂದ್ರ ಎಲ್ಲರ ಕಣ್ಮಣಿಯಾಗಿದ್ದು, ರಾಜಕೀಯದಲ್ಲಿ ಹಂತಹಂತವಾಗಿ ಬೆಳೆದು ಪಕ್ಷದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಅವರ ನಾಯಕತ್ವದಲ್ಲಿ ಪಕ್ಷ ಸಂಘಟನಾತ್ಮಕವಾಗಿ ಬೆಳೆಯುತ್ತಿದೆ. ಮಾಜೀ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರ ಪುತ್ರರಾಗಿರುವ ವಿಜಯೇಂದ್ರ ತಂದೆಯಂತೆಯೆ ಮಗ ಕೂಡಾ ಪಕ್ಷಕ್ಕಾಗಿ ಅಹರ್ನಿಶಿಯಾಗಿ ದುಡಿಯುತ್ತಿದ್ದಾರೆ. ಅವರ ಮುಂದಿನ ಜೀವನ ಸುಖಕರವಾಗಲಿ, ರಾಜಕೀಯದಲ್ಲಿ ಇನ್ನೂ ಎತ್ತರದ ಸ್ಥಾನಕ್ಕೆ ಅವರು ಏರಲಿ ಎಂದು ರವೀಂದ್ರ ಶೆಟ್ಟಿ ವಿಜಯೇಂದ್ರರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿ ಮಾತನಾಡಿದರು. ಬಹು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.