Categories: ಮಂಗಳೂರು

ಮಂಗಳೂರು: ಶಾಸಕ ಹರೀಶ್‌ ಪೂಂಜಾ ವಿರುದ್ಧ ಪ್ರಕರಣಕ್ಕೆ ತಡೆಯಾಜ್ಞೆ

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ ಐಪಿಸಿ ಸೆಕ್ಷನ್ 153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಅಭಿಪ್ರಾಯ ಪಟ್ಟಿದೆ.

ಹರೀಶ್‌ ಪೂಂಜಾ ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ವಿಳಂಬವಾಗಿ ದೂರು ದಾಖಲಿಸಿದ್ದರ ಹಿಂದೆ ದುರುದ್ದೇಶ ಇದೆ ಎಂದು ಶಾಸಕ ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡನೆ ಮಾಡಿದ್ದರು. ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು.

Sneha Gowda

Recent Posts

ಮಲ್ಪೆ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸಿ: ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿರುವ ಅಗ್ನಿಶಾಮಕ ದಳದ 15 ವರ್ಷ ಹಿಂದಿನ ಎರಡು ವಾಹನಗಳನ್ನು ಸರ್ಕಾರ ಎರಡು ತಿಂಗಳ ಹಿಂದೆ ಸೇವೆಯಿಂದ…

2 mins ago

ಹುಟ್ಟೂರು ಕೆರಾಡಿಯಲ್ಲಿ ಮತ ಚಲಾಯಿಸಿದ ರಿಷಬ್ ಶೆಟ್ಟಿ

ಕಾಂತಾರ’ ಸೂಪರ್ ಸ್ಟಾರ್ ರಿಷಬ್ ಶೆಟ್ಟಿ ‘ಕಾಂತಾರ’ ಪಾರ್ಟ್‌ 1 ಚಿತ್ರದ ಶೂಟಿಂಗ್‌ಗೆ ಬ್ರೇಕ್ ನೀಡಿ ಇಂದು (ಮೇ.7) ಮತದಾನ…

14 mins ago

ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.

16 mins ago

ಲೋಕಸಭಾ ಚುನಾವಣೆ: ಹುಬ್ಬಳ್ಳಿ, ಧಾರವಾಡದಲ್ಲಿ ಬಿರುಸಿನ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತದಾನ ಪ್ರಕ್ರಿಯೆ ನಡೆದಿದ್ದು ಹುಬ್ಬಳ್ಳಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಲ್ಲಾದ ಜೋಶಿ ಅವರು ಕುಟುಂಬ…

26 mins ago

ನಾನು ಇಸ್ಲಾಂ ಹಾಗೂ ಮುಸ್ಲಿಮರ ವಿರೋಧಿಯಲ್ಲ: ಪ್ರಧಾನಿ ಮೋದಿ

ನಾನು ಎಂದಿಗೂ ಇಸ್ಲಾಂ ಧರ್ಮ ಮತ್ತು ಮುಸ್ಲಿಂರನ್ನು ವಿರೋಧಿಸುವುದಿಲ್ಲ ಹೀಗಾಗಿ ಆ ಸಮುದಾಯದವರು ತಮ್ಮ ಹಕ್ಕು ಚಲಾಯಿಸುವಾಗ ತಮ ಭವಿಷ್ಯದ…

40 mins ago

ಮಂಗಳೂರು: ಹಿರಿಯ ನಿವಾಸಿಗಳಿಗೆ ಶ್ರವಣ ದೋಷ ನಿವಾರಕ ಯಂತ್ರೋಪಕರಣ ವಿತರಣೆ

ಲಿಟ್ಸ್ ಸಿಸ್ಟರ್ಸ್ ಆಫ್ ದಿ ಪೂವರ್ ಹಾಗೂ ಹೋಮ್ ಫಾರ್ ದಿ ಏಜೆಡ್ ಸಂಸ್ಥೆಯ ಸಭಾಂಗಣದಲ್ಲಿ ಸಂಸ್ಥೆಯ ನಿವಾಸಿಗಳಿಗಾಗಿ “ಶ್ರವಣ…

1 hour ago