News Karnataka Kannada
Wednesday, April 24 2024
Cricket
ಮಂಗಳೂರು

ಮಂಗಳೂರು: ಮೈಮೇಲೆ ಸಾಂಬಾರು ಚೆಲ್ಲಿತೆಂದು ಸಹಪಾಠಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ

Mangaluru: Student stabs classmate for spilling sambar on him
Photo Credit : News Kannada

ಮಂಗಳೂರು: ಮಧ್ಯಾಹ್ನದ ಊಟದ ವೇಳೆ ಬಟ್ಟೆಗೆ ಸಾಂಬಾರು ಚೆಲ್ಲಿದ ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಸಂಘರ್ಷ ಉಂಟಾಗಿದ್ದು, ವಿದ್ಯಾರ್ಥಿಯೋರ್ವನ ಎದೆಗೆ ಮತ್ತೋರ್ವ ವಿದ್ಯಾರ್ಥಿ ಚಾಕು ಎಸೆದು ಕ್ರೌರ್ಯ ಮೆರೆದ ಘಟನೆ ನರಿಂಗಾನ ಗ್ರಾಮದ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿದೆ.

ಬುಧವಾರ ಮಧ್ಯಾಹ್ನ ಊಟದ ಹೊತ್ತಿನಲ್ಲಿ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿದ್ದಲ್ಲದೆ ಆತನ ನೋಟ್ ಪುಸ್ತಕವನ್ನ ಸಾಂಬಾರಿಗೆ ಹಾಕಿ ಅಲ್ಲಿಂದ ಮುಂದೆ ಹೋಗಿದ್ದಾನಂತೆ. ಏಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ ಹರಿತ ಚೂರಿ ತೆಗೆದು ಹಲ್ಲೆಗೈದವನ ಮೇಲೆ ನೇರವಾಗಿ ಎಸೆದಿದ್ದಾನೆ. ಅದೃಷ್ಟವಶಾತ್ ಬಲ ಎದೆ ಭಾಗದ ಪಕ್ಕಕ್ಕೆ ಚೂರಿ ಚುಚ್ಚಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ವೈಸ್ ಪ್ರಿನ್ಸಿಪಾಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದು ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆಯ ದೃಶ್ಯಾವಳಿ ಶಾಲಾ ತರಗತಿ ಕೊಠಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎನ್ನಲಾಗುತ್ತಿದೆ. ಘಟನೆಯ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪ‌ ವಿಭಾಗ ಎಸಿಪಿ ಧನ್ಯ ನಾಯಕ್, ಕೊಣಾಜೆ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ ಸೇರಿದಂತೆ ಅಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಶಾಲೆಗೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತಂತೆ ಮಕ್ಕಳ ನ್ಯಾಯಾಲಯಕ್ಕೆ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಇಂದು ಕೂಡಾ ಘಟನಾ ಸ್ಥಳಕ್ಕೆ ಎಸಿಪಿ ಧನ್ಯಾ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿ ವಿದ್ಯಾರ್ಥಿ ಚಾಕುವಿನಿಂದ ಸಹಪಾಠಿಯ ಮೇಲೆ ದಾಳಿ ನಡೆಸಿದ್ದು ಆಘಾತಕಾರಿ ವಿಚಾರವಾಗಿದೆ. ಬಾಲಕನ ಬ್ಯಾಗಲ್ಲಿ ಚಾಕು ಹೇಗೆ ಬಂತು..? ವಿದ್ಯಾರ್ಥಿಗಳ ನಡುವೆ ದ್ವೇಷ ಇತ್ತೇ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು