News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಸುನೀಲ್ ಬಜಿರಕೇರಿ ಬಂಧನ ಖಂಡನೀಯ, ಬಿಡುಗಡೆಗೆ ಆಗ್ರಹ – ಡಿವೈಎಫ್ಐ

Mangaluru: Sunil Bajirakeri's arrest condemnable, demands immediate release, says DYFI
Photo Credit : Wikipedia

ಮಂಗಳೂರು: ಮಂಗಳೂರಿನಲ್ಲಿ ರಾಜಾರೋಷವಾಗಿ ನಡೆಯುವ ಅಕ್ರಮ, ಅನ್ಯಾಯಗಳ ವಿರುದ್ಧ, ಬಿಜೆಪಿ ಸರಕಾರಗಳ ಜನವಿರೋಧಿ ನೀತಿಗಳ ವಿರುಧ್ದ ನಿರಂತರ ಮತ್ತು ನಿರ್ಭೀತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ನಿನ್ನೆ ರಾತ್ರಿ ಬಜಪೆ ಠಾಣಾ ಪೊಲೀಸರು ವಿನಾಃ ಕಾರಣ ಬಂಧಿಸಿರುವುದನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಖಂಡಿಸುತ್ತದೆ.

ಕರ್ನಾಟಕದ ರಾಜ್ಯದ ಬಿಜೆಪಿ ಸರಕಾರದ ದುರಾಡಳಿತದ ವಿರುಧ್ದ, ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ , ಭರತ್ ಶೆಟ್ಟರ ಅಕ್ರಮ, ಅನ್ಯಾಯಗಳನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಬರಹಗಳ ಮತ್ತು ವ್ಯಂಗ್ಯ ಚಿತ್ರಗಳ ಮೂಲಕ ವಿರೋಧ ದಾಖಲಿಸುವಂತಹ ಹೇಳಿಕೆಗಳು ಜನರ ಗಮನವನ್ನು ಸೆಳೆಯುತ್ತಿದ್ದರಿಂದ ಮುಜುಗರಕ್ಕೊಳಗಾಗುತ್ತಿದ್ದ ಸ್ಥಳೀಯ ಶಾಸಕರು ತಮ್ಮ ಅಧಿಕಾರ ಪ್ರಯೋಗಿಸಿ ಪೊಲೀಸರ ಮೂಲಕ ಹೋರಾಟಗಾರ ಸುನೀಲ್ ಬಜಿಲಕೇರಿ ಬಾಯಿಯನ್ನು ಮುಚ್ಚಿಸುವ ಪ್ರಯತ್ನದ ಭಾಗವಾಗಿ ಆಧಾರ ರಹಿತ ದೂರಿನಡಿಯಲ್ಲಿ ನಿನ್ನೆ ಬಜಪೆ ಠಾಣಾ ಪೊಲೀಸರು ಬಂಧಿಸಿರುತ್ತಾರೆ. ಈ ಹಿಂದೆಯೂ ಇದೇ ರೀತಿ ಹೋರಾಟಗಾರ ಸುನೀಲ್ ಬಜಿಲಕೇರಿಯನ್ನು ಬಂಧಿಸಿ ಜೈಲಿಗಟ್ಟಿರುವ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಮ್ಮೆ ಈ ರೀತಿ ಬಂಧಿಸುತ್ತಿರುವುದು ತೀರಾ ಖಂಡನೀಯ.

ಬಿಜೆಪಿ ಸರಕಾರ ಜನಪ್ರತಿನಿಧಿಗಳ ವಿರುದ್ದ ಧ್ವನಿ ಎತ್ತಿದ್ದರೆ ಅಂತಹ ಧ್ವನಿಗಳನ್ನು ಆಧಾರರಹಿತ ದೂರಿನಡಿ ಬಂಧಿಸಿ ಜೈಲಿಗಟ್ಟುವ ಮೂಲಕ ಕುಗ್ಗಿಸುವ ಪ್ರಯತ್ನಗಳ ಭಾಗವಾಗಿದೆ. ಕೇಂದ್ರ ಸರಕಾರದಿಂದ ಹಿಡಿದು ರಾಜ್ಯ ಸರಕಾರಗಳ ವರೆಗೂ ಇದೇ ರೀತಿಯ ನೀತಿಗಳನ್ನು ಅಳವಡಿಸುವ ಮೂಲಕ ಎಡಪಂಥೀಯ ಹೋರಾಟಗಾರರನ್ನು, ಸಾಮಾಜಿಕ ಕಾರ್ಯಕರ್ತರುಗಳನ್ನು ಬಂಧಿಸಿ ಜೈಲಿಗಟ್ಟಲಾಗುತ್ತಿದೆ.

ಬಿಜೆಪಿ ಸರಕಾರಗಳು ಸರ್ವಾಧಿಕಾರಿಗಳಾಗಿ ವರ್ತಿಸುತ್ತಿದ್ದು ಸರಕಾರಗಳ ಜನವಿರೋಧಿ ನೀತಿಗಳನ್ನು ಮರೆಮಾಚಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನಿಸಲಾಗುತ್ತಿದೆ. ಇನ್ನು ಸರಕಾರಗಳ, ಜನಪ್ರತಿನಿಧಿಗಳ ಅಕ್ರಮಗಳನ್ನು, ಅನ್ಯಾಯಗಳನ್ನು ಪ್ರಶ್ನಿಸುವ ಸುನೀಲ್ ಬಜಿಲಕೇರಿಯಂತಹ ಹೋರಾಟಗಾರರನ್ನು ಜೈಲಿಗಟ್ಟಲಾಗುತ್ತಿದೆ ಇಂತಹ ಅನ್ಯಾಯಗಳ ವಿರುದ್ಧ ಧ್ವನಿ ಎತ್ತಬೇಕಾಗಿದೆ. ಬಿಜೆಪಿ ಸರಕಾರದ ಈ ನಡೆಯನ್ನು ಹಾಗೂ ನಗರದ ಪೊಲೀಸ್ ಇಲಾಖೆಯ ಕ್ರಮವನ್ನು ಡಿವೈಎಫ್ಐ ದ. ಕ ಜಿಲ್ಲಾ ಸಮಿತಿ ಖಂಡಿಸುತ್ತದೆ. ಆಧಾರರಹಿತ ದೂರಿನಡಿಯಲ್ಲಿ ಬಂಧಿಸಿದ ಸುನೀಲ್ ಬಜಿಲಕೇರಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸುತ್ತದೆ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
15229
Jaya Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು