ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಜಿಲ್ಲಾಡಳಿತ ನಿರ್ಬಂಧ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು , ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿಂದ ಪೀಠವು ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ವರ್ಗಾವಣೆ ಮಾಡಿದ್ದು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹೇಳಿವೆ , ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶದ ಅವಧಿ ಈಗಾಗಲೇ ಮುಗಿದಿದ್ದು ವಿಚಾರಣೆಗೆ ಮಾನ್ಯತೆ ಕಳೆದುಕೊಂಡಿರುದಾಗಿ ತಿಳಿಸಿದೆ.