ಮಂಗಳೂರು: ದೇಶದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಅಭೂತಪೂರ್ವ ಜಯಗಳಿಸಿದ ಹಿನ್ನೆಲೆಯಲ್ಲಿ ಮಂಗಳೂರು ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಜಿಲ್ಲಾ ಬಿಜೆಪಿ ಕಚೇರಿ ಎದುರು ನಡೆದ ವಿಜಯೋತ್ಸವದಲ್ಲಿ ಶಾಸಕ ವೇದವ್ಯಾಸ್ ಕಾಮತ್ , ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ,ಸಹಿತ ಇತರ ಬಿಜೆಪಿ ಕಾರ್ಪೊರೇಟರ್ ಸಹಿತ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಪರಸ್ಪರ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು ಬಳಿಕ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿದರು.