News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಕೋವಿಡ್‌ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ

Kerala: Covid surge, use of masks mandatory, says govt
Photo Credit : News Kannada

ಮಂಗಳೂರು: ಕೊರೊನಾ ರೂಪಾಂತರಿ ಬಿಎಫ್‌ 7 ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ವಿಮಾನ ನಿಲ್ದಾಣದಲ್ಲಿ ಈ ಹಿಂದೆಯೇ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇಡಲಾಗುತ್ತಿತ್ತು. ಅದನ್ನು ಸದ್ಯ ಮುಂದುವರಿಸಲಾಗಿದ್ದು, ಪ್ರಯಾಣಿಕರ ಪೈಕಿ ಶೇ. 2ರಷ್ಟು ಮಂದಿಗೆ ಕೋವಿಡ್‌ ತಪಾಸಣೆ ನಡೆಸಲಾಗುತ್ತಿದೆ.

ಕೋವಿಡ್‌ ಪ್ರಕರಣ ದಾಖಲಾದರೆ ಹೆಚ್ಚಿನ ಪರೀಕ್ಷೆಗೆಂದು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಲ್ಯಾಬ್‌ಗ ಕಳುಹಿಸಲಾಗುತ್ತಿದೆ. ದ.ಕ.ದಲ್ಲಿ ಕಳೆದ ಐದು ದಿನಗಳಿಂದ ಯಾವುದೇ ಹೊಸ ಕೋವಿಡ್‌ ಪ್ರಕರಣಗಳಿರಲಿಲ್ಲ. ಆದರೂ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಕೋವಿಡ್‌ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ.

ಅದರಂತೆ ವೆನ್ಲಾಕ್‌ ಆಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಶನ್‌ ವಾರ್ಡ್‌ ತೆರೆಯಲು ಸಿದ್ದತೆ ನಡೆಯುತ್ತಿದೆ. ವಿಮಾನದಲ್ಲಿ ಆಗ ಮಿಸುವ ಅಂತಾರಾಷ್ಟ್ರೀಯ ಪ್ರಯಾ ಣಿಕರಿಗೆ ಕೋವಿಡ್‌ ಲಕ್ಷಣ ಇದ್ದರೆ ಅವರನ್ನು ಈ ಐಸೋಲೇಶನ್‌ ವಾರ್ಡ್‌ಗೆ ದಾಖಲಿಸಲಾಗುತ್ತದೆ. ಕೋವಿಡ್‌ ದೃಢಪಟ್ಟರೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ.

ಶಾಪಿಂಗ್‌ ಮಾಲ್‌, ಕಚೇರಿಗಳು, ಸಿನೆಮಾ ಹಾಲ್‌, ಪಬ್‌, ಬಾರ್‌, ರೆಸ್ಟೋರೆಂಟ್‌, ಬಸ್‌, ರೈಲು, ವಿಮಾನ ಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯ. ಆರೋಗ್ಯ ಸಮಸ್ಯೆ ಇರುವವರು, ವೃದ್ಧರು ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ. ಅರ್ಹರೆಲ್ಲರೂ ಕೋವಿಡ್‌ 19 ಲಸಿಕೆಯ ಮುನ್ನೆಚ್ಚರಿಕೆ ಡೋಸ್‌ ಶೀಘ್ರ ಪಡೆಯಿರಿ.

ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಆಯೋಜಿಸಬೇಕು. ಕೈಗಾರಿಕೆ ಸಹಿತ ಇತರ ಕಾರ್ಖಾನೆ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿ ಕಡ್ಡಾಯವಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳ ಬೇಕು ಮತ್ತು ಮಾಸ್ಕ್ ಧರಿಸಬೇಕು. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪು ಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟ ಬೇಕು ಎಂದು ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು