News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಪ್ರತಿಷ್ಠಿತ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿ ಪ್ರದಾನ ಸಮಾರಂಭ

Mangaluru: The prestigious Padyana Gopalakrishna Award ceremony
Photo Credit : By Author

ಮಂಗಳೂರು: ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಯನ್ನು ವಿಜಯವಾಣಿ ಹೆಬ್ರಿ ವರದಿಗಾರ ನರೇಂದ್ರ ಮರಸಣಿಗೆ ಅವರಿಗೆ ಪ್ರದಾನ ಮಾಡಲಾಯಿತು.

ಪ್ರಶಸ್ತಿಯು ೧೦,೦೦೧ ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿತ್ತು. ನರೇಂದ್ರ ಅವರ ‘ಮತ್ತಾವಿಗೆ ಮತ್ಯಾವಾಗ ಸೇತುವೆ’ ವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನರೇಂದ್ರ ಮರಸಣಿಗೆ, ‘ಮತ್ತಾವು ತೀರಾ ಗ್ರಾಮೀಣ ಪ್ರದೇಶವಾಗಿದ್ದು, ರಸ್ತೆ, ಮೂಲಸೌಲಭ್ಯ ಮರೀಚಿಕೆಯಾದ ಊರಾಗಿದೆ. ಮಳೆಗಾಲದ ಆರು ತಿಂಗಳು ಇಲ್ಲಿಗೆ ತೆರಳುವುದಕ್ಕೆ ಹರಸಾಹಸ ಪಡಬೇಕು. ಜತೆಗೆ ಮತ್ತಾವು ನಕ್ಸಲ್ ಪೀಡಿತ ಪ್ರದೇಶ. ಇಲ್ಲಿಗೆ ಸೇತುವೆ ನಿರ್ಮಿಸುತ್ತೇವೆ ಎಂಬ ಆಡಳಿತ ವರ್ಗ ನೀಡಿದ ಭರವಸೆ ಇನ್ನೂ ಈಡೇರಿಲ್ಲ’ ಎಂದರು.

ಗ್ರಾಮೀಣ ಪತ್ರಕರ್ತರು ಸವಾಲಿನ ನಡುವೆ ಕೆಲಸ ಮಾಡುತ್ತಿದ್ದಾರೆ. ವರದಿಗಾರಿಕೆ ಮೇಲೆ ರಾಜಕೀಯ ಪರಿಣಾಮ ಬೀರುತ್ತಿರುವುದು ದುರಂತ ಎಂದರು.

ಮೆಸ್ಕಾಂ ತಾಂತ್ರಿಕ ನಿರ್ದೇಶಕ ರಮೇಶ್ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಹಿರಿಯ ಪತ್ರಕರ್ತ ಶ್ರೀಕರ ಎಲ್. ಭಂಡಾರ್ಕರ್ ಅತಿಥಿಯಾಗಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಶಸ್ತಿ ಪುರಸ್ಕೃತರ ವಿವರ ನೀಡಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಮುಹಮ್ಮದ್ ಆರೀಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು