ಮಂಗಳೂರು: ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವಿದ್ಯಾರ್ಥಿನಿಯರು ಬುಧವಾರ ಮುಂಜಾವ ಸುಮಾರು 3.30ಕ್ಕೆ ಹಾಸ್ಟೆಲ್ನ ಕಿಟಕಿಯನ್ನು ಮುರಿದು ಪರಾರಿಯಾಗಿದ್ದರು. ಈ ವಿಷಯ ಬುಧವಾರ ಬೆಳಗ್ಗೆ ಸ್ನೇಹಿತೆಯರ ಗಮನಕ್ಕೆ ಬಂದಿತ್ತು.
ವಿದ್ಯಾರ್ಥಿನಿಯರು ಮಂಗಳೂರು ರೈಲು ನಿಲ್ದಾಣ ಮೂಲಕ ಕೊಯಮುತ್ತೂರಿಗೆ ಪ್ರಯಾಣಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಿದ್ಯಾರ್ಥಿನಿಯರ ಪೋಷಕರೊಂದಿಗೆ ಕೊಯಮುತ್ತೂರಿಗೆ ತೆರಳಿದ್ದರು. ಅಲ್ಲದೆ ಮಂಗಳೂರು ಪೊಲೀಸರು ಚೆನ್ನೈಯ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು.
ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿದ ಪೊಲೀಸರು ಬಳಿಕ ಸ್ವೀಕಾರ ಕೇಂದ್ರಕ್ಕೆ ಒಪ್ಪಿಸಿದರು.