ಮಂಗಳೂರು

ಮಂಗಳೂರು: ಜು.22ರಂದು ಸಾವಯವ ಕೈತೋಟ,ಟೆರೇಸ್ ಗಾರ್ಡನ್ ಬಗ್ಗೆ ತರಬೇತಿ ಶಿಬಿರ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರಸಂಘ ಮತ್ತುಸಾವಯವ ಕೃಷಿ ಕ ಬಳಗ ಮಂಗಳೂರು ಇದರ ಸಹಯೋಗದಲ್ಲಿ ಸಾವಯವ ಕೈತೋಟ ,ಟೆರೇಸ್ ಗಾರ್ಡನ್ ತರಬೇತಿ ಶಿಬಿರ ಜುಲೈ 22 ರಂದು ಪೂರ್ವಾಹ್ನ 11ಗಂಟೆಗೆ ನಗರದ ಪತ್ರಿಕಾಭವನ ( ಲೇಡಿ ಹಿಲ್  ಊರ್ವ ಮಾರುಕಟ್ಟೆ ರಸ್ತೆ)ದಲ್ಲಿ ನಡೆಯಲಿದೆ.

ನಮ್ಮ ಮನೆಯಂಗಳದಲ್ಲಿ, ಸಣ್ಣ ಬಾಲ್ಕನಿಯಲ್ಲಿ ತರಕಾರಿ, ಹೂವು ಬೆಳೆಯುವುದು ಹೇಗೆ ಎಂಬುದನ್ನು  ಈ ಶಿಬಿರದಲ್ಲಿ ಮಂಗಳೂರು ಸಾವಯವ ಕೃಷಿಕ ಗ್ರಾಹಕ ಬಳಗ ಕೈತೋಟ ಕ್ರಾಂತಿ ಎಂಬ ಯೋಜನೆಯಡಿ ತರಬೇತಿ ನೀಡಲಿದ್ದಾರೆ. ನಗರದ ಮನೆಮನೆಯಲ್ಲಿ ಸಾವಯವ ಪದ್ಧತಿಯಲ್ಲಿ ಕಾಲಮಾನಗಳ ಹೂವು ಮತ್ತು ತರಕಾರಿಗಳನ್ನು ಬೆಳೆಸುವುದರ ಬಗ್ಗೆ ಈ ಬಳಗ  ಜಾಗೃತಿ ಮೂಡಿಸುತ್ತಿದೆ.

ಈ ಶಿಬಿರದಲ್ಲಿ ದ.ಕ.ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಉದ್ಘಾಟಕರಾಗಿ ಭಾಗವಹಿಸಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.ಅತಿಥಿ ಗಳಾಗಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಚ್.ಆರ್. ನಾಯಕ್.ಮಂಗಳೂರು ಸಾವಯವ ಕೃಷಿಕ ಗ್ರಾಹಕ ಬಳಗ ಅಧ್ಯಕ್ಷರು ಜಿ ಆರ್ ಪ್ರಸಾದ್, ಸಂಪನ್ಮೂಲ ವ್ಯಕ್ತಿ ಶ್ರೀ ಹರಿಕೃಷ್ಣ ಕಾಮತ್ ಪುತ್ತೂರು. ಭಾಗವಹಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

47 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

1 hour ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago