News Karnataka Kannada
Monday, April 29 2024
ಮಂಗಳೂರು

ಮಂಗಳೂರು: ದಕ್ಷಿಣ ಕನ್ನಡ -ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ

Mild earthquake hits Himachal Pradesh's Chamba
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮತ್ತು ಮಡಿಕೇರಿಯ ಗಡಿಭಾಗವಾದ ಕಲ್ಮಕಾರು ಪರಿಸರದಲ್ಲಿ ಭಾನುವಾರ ಸಂಜೆ 6.15ಕ್ಕೆ ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ತಿಳಿದು ಬಂದಿದೆ.

ಕಲ್ಮಕಾರಿನ ಮೆಂಟೆಕಜೆ, ಗುಳಿಕ್ಕಾನ ಪ್ರದೇಶದಲ್ಲಿ ಶಬ್ದ ಹಾಗೂ ಕಂಪನದ ಅನುಭವವಾಗಿದ್ದು, ಕೊಲ್ಲಮೊಗ್ರದವರೆಗೂ ಶಬ್ದ ಕೇಳಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಲ್ಲುಗುಂಡಿಯ ಚಟ್ಟೆಕಲ್ಲು, ಕೊಯನಾಡಿನ ಮಂಗಳಪಾರೆ ಎಂಬಲ್ಲಿ ಸಹ ಭೂಮಿ ಕಂಪಿಸಿದೆ ಎಂದು ಅಲ್ಲಿನ ಸ್ಥಳೀಯರು ಹೇಳಿದ್ದಾರೆ.

ಕಳೆದ ಒಂದೂವರೆ ತಿಂಗಳ ಹಿಂದೆ ಸುಳ್ಯ ತಾಲೂಕಿನ ಗಡಿ ಬಾಗದಲ್ಲಿ ಕೆಲವೆಡೆ ಭೂಮಿ ಏಳೆಂಟು ಬಾರಿ ಕಂಪಿಸಿತ್ತು. ಆ ಸಂದರ್ಭದಲ್ಲಿ ಚೆಂಬು ,ಅರಂತೋಡು ಪ್ರದೇಶ ಕಂಪನದ ಕೇಂದ್ರ ಬಿಂದುವಾಗಿತ್ತು. ಇದೀಗ ಮತ್ತೆ ದಕ್ಷಿಣ ಕನ್ನಡ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಭೂಮಿ ಕಂಪಿಸಿದ್ದು ಜನರು ಆತಂಕ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು