News Karnataka Kannada
Saturday, April 27 2024
ಮಂಗಳೂರು

ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳ ಬಂಧನ

Two accused arrested in Praveen murder case
Photo Credit : News Kannada

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಬಿ.ಸೋನವಾನೆ ತಿಳಿಸಿದ್ದಾರೆ.

ಬೆಳ್ಳಾರೆಯ ಜಾಕೀರ್ ಮತ್ತು ಶಫೀಕ್ ಅವರನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯಬೇಕಿದ್ದು, ಈ ಹಂತದಲ್ಲಿ ಬೇರೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದರು. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಮತ್ತು ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ನಾನು ಈಗ ಇಷ್ಟು ಹೇಳಬಲ್ಲೆ, “ಎಂದು ಅವರು ಹೇಳಿದರು.

ಇವರಿಬ್ಬರೂ ಎಸ್‌ಡಿಪಿಐ ಜೊತೆ ನಂಟು ಹೊಂದಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇಬ್ಬರಿಗೂ ಹಲವು ಕ್ರಿಮಿನಲ್ ಹಿನ್ನಲೆ ಇದೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಕಾಸರಗೋಡಿನಿಂದ ಬಂಧಿಸಲಾಗಿದೆ. ಇದೀಗ ಅವರನ್ನು ವಿಟ್ಲ ಪೊಲೀಸ್ ಠಾಣೆಗೆ ಕರೆತರಲಾಗಿದೆ. ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು