ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಮೆತಫಿಟಮೈನ್ ಮತ್ತು ಎಲ್ಎಸ್ಡಿ ಸ್ಟ್ಯಾಂಪ್ ಡ್ರಗ್ಸ್ ಅಕ್ರಮವಾಗಿ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅರೋಪಿಗಳು ಶಿಶಿರ ದೇವಾಡಿಗ ಹಾಗೂ ಶುಶಾನ್ ಎಲ್ ಎಂದು ತಿಳಿದು ಬಂದಿದೆ. ಆರೋಪಿಗಳು ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರದ ಸಾರ್ವಜನಿಕ ರಸ್ತೆ ಬದಿಯಲ್ಲಿ ಸ್ವಿಫ್ಟ್ ಕಾರಿನಲ್ಲಿ ಬಂದು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳಿಂದ ಸುಮಾರು ೧೩೨ ಗ್ರಾಂ ತೂಕದ ಮೆತಫಿಟಮೈನ್ ಡ್ರಗ್ಸ್ ಮತ್ತು 250 ಎಲ್ಎಸ್ಡಿ ಸ್ಟ್ಯಾಂಪ್ ಡ್ರಗ್ಸ್, 3,70,050 ರೂ. ಹಾಗೂ ಸ್ವಿಪ್ಟ್ ಕಾರು ಸೇರಿದಂತೆ ಒಟ್ಟು 14,01,050 ರೂ. ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಧನ್ಯ ಎನ್ ನಾಯಕ ಸಹಾಯಕ ಪೊಲೀಸ್ ಆಯುಕ್ತರು, ಮಂಗಳೂರು ದಕ್ಷಿಣ ಉಪವಿಭಾಗದವರ ನೇತೃತ್ವದಲ್ಲಿ Anti-Drug Team ಪಿಎಸ್ಐ ಪುನಿತ್ ಗಾಂವ್ಕರ್, ಉಳ್ಳಾಲ ರಾಣಾ ಪಿಎಸ್ಐ, ಸಂತೋಷಕುಮಾರ್.ಡಿ. ಹಾಗೂ ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್ ಕುಮಾರ್ , ಶಿವಕುಮಾರ್, ಅಕ್ಬರ್ ಯಡ್ರಾಮಿರವರು ಇದ್ದರು.