ಮಂಗಳೂರು: ಕೋಟ್ಯಾಂತರ ಮೌಲ್ಯದ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನಿಮಿತ್ 26 ಯೋಗೀಶ್ 41 ಬಂಧಿತ ಆರೋಪಿಗಳು.
ಮಂಗಳೂರು ನಗರದ ಲಾಲ್ಬಾಗ್ ಕರಾವಳಿ ಮೈದಾನ ಪರಿಸರದಲ್ಲಿ ಕೋಟ್ಯಂತರ ಬೆಳೆಬಾಳುವ ಅಪರೂಪದ ವನ್ಯಜೀವಿ ಉತ್ಪನ್ನವಾದ ಅಂಬರ್ ಗ್ರೀಸ್ ತಿಮಿಂಗಿಲ ವಾಂತಿಯನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಎತ್ತಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಸ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಅಪರೂಪದ ಹಾಗೂ ಕೋಟ್ಯಾಂತರ ರೂಪಾಯಿ ಬೆಲೆಬಾಳುವ 3.2 ಕೆಜಿ ತೂಕದ ಅಂಬರ್ ಗ್ರೀಸ್ ಸಾಗು ಎರಡು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 3.2 ಕೋಟಿ ಮೌಲ್ಯವಿರುತ್ತದೆ ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಅಪರೂಪದ ಬೆಳೆ ಬಾಳುವ ಅಂಬರ್ ಗ್ರೀಸ್ ಹಾಗೂ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್ಪೆಕ್ಟರ್ ಸ್ಯಾಮ್ ಸುಂದರ್ ,ರಾಜೇಂದ್ರ , ಸುದೀಪ್ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು