News Karnataka Kannada
Saturday, May 11 2024
ಮಂಗಳೂರು

ಮಂಗಳೂರು: ಯು ಟಿ ಖಾದರ್ ಗೆ ಕೋವಿಡ್ ಪಾಸಿಟಿವ್, ಪ್ರಧಾನಿ ಕಾರ್ಯಕ್ರಮದಿಂದ ದೂರ ಉಳಿದ ಶಾಸಕ

Assembly Speaker U T Khader addresses press conference in Mangaluru
Photo Credit : Facebook

ಮಂಗಳೂರು: ಮಾಜಿ ಸಚಿವ ವಿಧಾನ ಸಭೆ ವಿಪಕ್ಷ ಉಪನಾಯಕನ ಶಾಸಕ ಯು ಟಿ ಖಾದರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು ಮಂಗಳೂರಿನ ಪ್ರಧಾನಿ ಭೇಟಿ ಕಾರ್ಯಕ್ರಮ ಸೇರಿ 3ದಿನಗಳ ಕಾಲ ಅವರು ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ ಆರ್ ಟಿಪಿಸಿಆರ್ ರಿಪೋರ್ಟ್ ಕಡ್ಡಾಯ ಪಡಿಸಲಾಗಿತ್ತು. ನಿನ್ನೆ ರಾತ್ರಿ ಶಾಸಕ ಯುಟಿಖಾದರ್ ಅವರನ್ನು ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಿದ್ದು ರೋಗದ ಯಾವುದೇ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ಎಂದು ವರದಿ ಬಂದಿದೆ ವೈದ್ಯರ ಸಲಹೆಯಂತೆ 3ದಿನಗಳ ಕಾಲ ಕ್ವಾರಂಟೈನ್ ಆಗಲಿದ್ದಾರೆ.

ಆದ್ದರಿಂದ 3ದಿನಗಳಲ್ಲಿ ಯಾರನ್ನು ಭೇಟಿಯಾಗಲು ಸಾಧ್ಯವಾಗುವುದಿಲ್ಲ ಅಲ್ಲದೆ ಈ 3ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಪಡಿಸಿದ್ದಾರೆ .ಶಾಸಕರು 3ದಿನಗಳ ಕಾಲ ಸಾರ್ವಜನಿಕರ ಸೇವೆಗೆ ಲಭ್ಯವಾಗಿದ್ದು ಅಗತ್ಯಬಿದ್ದಲ್ಲಿ ದೂರವಾಣಿ ಸಂಖ್ಯೆ ನ್ನು ಸಂಪರ್ಕಿಸಬಹುದು . ಆದಷ್ಟು ಶೀಘ್ರವೇ ಗುಣಮುಖರಾಗಿ ಮತ್ತೆ ನನ್ನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ವಿಶ್ವಾಸವಿದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲವೆಂದು ಶಾಸಕ ಖಾದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು