Categories: ಮಂಗಳೂರು

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಅರೆಸ್ಟ್

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಿಂದ ಚಿಕಿತ್ಸೆಯಲ್ಲಿದ್ದ ವೇಳೆ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸಜೀವನಡು ನಿವಾಸಿ ಎಸ್.ಎಮ್ ನೌಫಾಲ್(32) ಬಂಧಿತ ಆರೋಪಿ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎನ್‌ಡಿಪಿಎಸ್ ಪುಕರಣಕ್ಕೆ ಸಂಬಂಧಿಸಿದಂತೆ ಎಸ್.ಎಮ್ ನೌಫಾಲ್ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದನು. ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಈತನನ್ನು ಪೊಲೀಸ್ ಭದ್ರತೆಯಲ್ಲಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ನೌಫಾಲ್ ಆಗಸ್ಟ್ 16ರಂದು 5.06ಕ್ಕೆ ವೆನ್ಲಾಕ್ ಆಸ್ಪತ್ರೆಯಿಂದ ಪೊಲೀಸ್ ಭದ್ರತೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ಆರೋಪಿಯ ಗಾರ್ಡ್ ಕರ್ತವ್ಯದಲ್ಲಿದ್ದ ಸಚಿನ್ ಕೆ.ಎಸ್ ನೀಡಿದ ದೂರಿನಂತೆ ಮಂಗಳೂರು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಸ್ಟ್ 19ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪಿ.ಎಸ್.ಐ ಮನೋಹರ್ ಪ್ರಸಾದ್‌ ಹಾಗೂ ಸಿಬ್ಬಂದಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

Ashika S

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

8 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

34 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

52 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago