Categories: ಮಂಗಳೂರು

ಮಂಗಳೂರು: ಮುಂಬಯಿ ವಿಶ್ವವಿದ್ಯಾಲಯದ ವತಿಯಿಂದ ಹರೀಶ್ ಶೆಟ್ಟಿ ಅವರಿಗೆ ಗೌರವಗ್ರಂಥ ಸಮರ್ಪಣೆ

ಮಂಗಳೂರು: ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗವು ಖ್ಯಾತ ಸಂಘಟಕ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರಿಗೆ ’ಸಾರ್ವಭೌಮ’ ಗೌರವಗ್ರಂಥದ ಲೋಕಾರ್ಪಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೦ ರಂದು ಶನಿವಾರ ಮಧ್ಯಾಹ್ನ ೨ ರಿಂದ ವಿಶ್ವವಿದ್ಯಾಲಯದ ಕಲಿನಾ ಕ್ಯಾಂಪಸ್ಸಿನಲ್ಲಿರುವ ಕವಿವರ್ಯ ಕುಸುಮಾಗ್ರಜ ಮರಾಠಿ ಭಾಷಾ ಈ ಭವನದಲ್ಲಿ ಆಯೋಜಿಸಿದೆ .

ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ಅವರು ಈ ಗೌರವಗ್ರಂಥವನ್ನು ಲೋಕಾರ್ಪಣೆ ಮಾಡಲಿದ್ದಾರೆ . ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ.ಸುಬ್ರಹ್ಮಣ್ಯ ಯಡಿಪಡಿತ್ತಾಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ.ಜಿ.ಎನ್.ಉಪಾಧ್ಯ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುಂಬಯಿಯ ಗಣ್ಯರ ಉಪಸ್ಥಿತಿಯಲ್ಲಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ನೆರವೇರಲಿದೆ. ಗೌರವಾನ್ವಿತ ಅತಿಥಿಗಳಾಗಿ ಸದಾಶಿವ ಶೆಟ್ಟಿ, ಕುಳೂರು, ಕನ್ಯಾನ ( ಆಡಳಿತ ನಿರ್ದೇಶಕರು, ಹೇರಂಬ ಇಂಡಸ್ಟ್ರೀಸ್ ), ಆನಂದ ಶೆಟ್ಟಿ (ಆಡಳಿತ ನಿರ್ದೇಶಕರು ಆರ್ಗಾನಿಕ್ ಕೆಮಿಕಲ್ಸ್) ಸುಧಾಕರ ಹೆಗ್ಡೆ (ಆಡಳಿತ ನಿರ್ದೇಶಕರು, ತುಂಗಾ ಗ್ರೂಪ್ ಆಪ್ ಹೊಟೇಲ್ಸ್ ), ಚಂದ್ರಹಾಸ.ಕೆ.ಶೆಟ್ಟಿ (ಅಧ್ಯಕ್ಷರು, ಬಂಟರ ಸಂಘ, ಮುಂಬಯಿ),ಡಾ.ಸುನೀತಾ ಎಂ.ಶೆಟ್ಟಿ ( ಹಿರಿಯ ಸಾಹಿತಿ, ಮುಂಬಯಿ), ಡಾ.ಸುರೇಶ್ ರಾವ್ (ಖ್ಯಾತ ವೈದ್ಯರು ಸಂಜೀವಿನಿ ಆಸ್ಪತ್ರೆ, ಮುಂಬಯಿ), ಹರೀಶ್.ಜಿ.ಅಮೀನ್( ಅಧ್ಯಕ್ಷರು,ಬಿಲ್ಲವರ ಅಸೋಸಿಯೇಶನ್, ಮುಂಬಯಿ),ಸುರೇಶ್ ಕಾಂಚನ್ (ಗೌರವ ಅಧ್ಯಕ್ಷರು, ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ, ಹೋಬಳಿ, ಮುಂಬಯಿ), ರವಿ.ಎಸ್.ಶೆಟ್ಟಿ(ಆಡಳಿತ ನಿರ್ದೇಶಕರು, ಸಾಯಿ ಪ್ಯಾಲೇಸ್ ಗ್ರೂಪ್ ಆಫ್ ಹೊಟೇಲ್ಸ್) ಉಮಾಕೃಷ್ಣಶೆಟ್ಟಿ( ಕಾರ್ಯಾಧ್ಯಕ್ಷೆ ಮಹಿಳಾ ವಿಭಾಗ, ಬಂಟರ ಸಂಘ ಮುಂಬಯಿ) ಇವರು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಚಂದ್ರಶೇಖರ ಪಾಲೆತ್ತಾಡಿ ಅವರು ಪ್ರಧಾನ ಸಂಪಾದಕರಾಗಿ ಹಾಗೂ ಸಂಪಾದಕರಾಗಿ ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಪೂರ್ಣಿಮಾ ಸುಧಾಕರ ಶೆಟ್ಟಿ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮವೂ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

29 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

46 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago