ಮಂಗಳೂರು: ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ರಾಜ್ಯ ಸರಕಾರದ ನೀತಿ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆ ನಡೆಸಿತು. ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿದ ಹಿಂದೂ ಸಂಘಟನೆ ಕಾರ್ಯಕರ್ತರು ರಾಜ್ಯ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೆ ತನ್ನ ನಿರ್ಧಾರವನ್ನು ಕೈಬಿಡುವಂತೆ ಒತ್ತಾಯ ಮಾಡಿದರು. ಗೋಹತ್ಯಾ ನಿಷೇಧ ಕಾನೂನನ್ನು ಹಿಂಪಡೆಯಲು ಸರಕಾರ ಮುಂದಾಗಿರುವುದು ದುರಂತ, ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ನಡಿಯುತ್ತಿದ್ದರೂ ಕಾಂಗ್ರೆಸ್ ಓಲೈಕೆಯ ರಾಜಕಾರಣ ಮಾಡುತ್ತಿದೆ. ಬಲವಂತ, ಆಮಿಷವೊಡ್ಡಿ ಮಾಡಲಾಗುತ್ತಿರುವ ಮತಾಂತರಕ್ಕೆ ರಾಜ್ಯ ಸರಕಾರ ಪ್ರೋತ್ಸಾಹ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇದು ಕೇವಲ ಸಾಂಕೇತಿಕ ಪ್ರತಿಭಟನೆ. ಈ ನಿರ್ಧಾರ ದಿಂದ ಹಿಂದೆ ಸರಿಯದಿದ್ದರೆ ಮುಂದೆ ನಡೆಯುವ ಅನಾಹುತಗಳಿಗೆ ಕಾಂಗ್ರೆಸ್ ಸರಕಾರ ಕಾರಣವಾಗಲಿದೆ ಎಂದು ಮುಖಂಡರು ತಿಳಿಸಿದ್ದಾರೆ.