ಮಂಗಳೂರು

ಮಂಗಳೂರು: ಮತ್ತೊಂದು “ಪಂಪ್‌ವೆಲ್ʼ” ಆಗಲಿದೆಯೇ ಕೂಳೂರು ಬ್ರಿಡ್ಜ್

ಮಂಗಳೂರು: ನಗರ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಕೂಳೂರು ಸೇತುವೆಗೆ ಚಾಲನೆ ನೀಡಿ ಮೂರು ವರ್ಷ ಕಳೆದರೂ ಯಾವುದೇ ಪ್ರಗತಿ ಕಾಣದೆ ನೆನೆಗುದಿಗೆ ಬಿದ್ದಿದೆ. ಈ ಮಧ್ಯೆ ಹೆದ್ದಾರಿ ಪ್ರಾಧಿಕಾರ 4 ವರ್ಷಗಳ ಹಿಂದೆಯೇ ಹಳೇ ಸೇತುವೆ ಅಸಮರ್ಥ ಎಂದು ವರದಿ ನೀಡಿದರೂ ಇನ್ನೂ ಅದೇ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟು ಸವಾರರನ್ನು ಅಪಾಯಕ್ಕೆ ತಳ್ಳಿದ್ದಾರೆ.

4 ವರ್ಷಗಳ ಹಿಂದೆಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ಸರ್ವೇ ಕಾರ್ಯ ಮಾಡುವ ವೇಳೆ ಕೂಳೂರು ಸೇತುವೆ ಸಂಚಾರಕ್ಕೆ ಯೋಗ್ಯವಲ್ಲ ಎಂದು ವರದಿ ನೀಡಿತ್ತು. ಇದೇ ವರದಿಯನ್ನು ಅಂದಿನ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಳುಹಿಸಿ ಕೊಟ್ಟಿತ್ತು. ಆಗ ಒಂದೇ ಸೇತುವೆ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ ಆ ಆದೇಶವನ್ನು ಹಿಂಪಡೆಯಲಾಯಿತು. ಇದಾದ ಕೆಲವೇ ತಿಂಗಳಲ್ಲಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನೂತನ ಸೇತುವೆಗೆ ಶಿಲನ್ಯಾಸ ನೀಡಿದ್ದರು. ಆದರೆ ಮೊದಲು ಭರದಿಂದ ಸಾಗಿದ ಕಾಮಗಾರಿ ಕ್ರಮೇಣ ನಿಂತು ಹೋಗಿ ಇಂದು ಮೂರು ವರ್ಷಗಳಾದರೂ ಪ್ರಗತಿ ಕಾಣದೇ ನೆನೆಗುದಿಗೆ ಬಿದ್ದಿದೆ.

ಇನ್ನೇನು ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಲ್ಲಿ ಸಿಪಿಐಎಂ ಪಂಜಿಮೊಗರು ವಲಯ ಸಮಿತಿ ಕೂಳೂರು ಸೇತುವೆ ಬಳಿ ಪ್ರತಿಭಟನೆಯನ್ನು ಕೂಡಾ ನಡೆಸಿದೆ.

ಕೂಳೂರು ಸೇತುವೆ ಕಾಮಗಾರಿ ಬಗ್ಗೆ ಸ್ಥಳೀಯ ಶಾಸಕ ಭರತ್ ಶೆಟ್ಟಿಗಾಗಲಿ, ಸಂಸದರಿಗಾಗಲೀ ಆಸಕ್ತಿ ಇಲ್ಲದಾಗಿದೆ. ಕಾಮಗಾರಿಯ ಕಮಿಷನ್ ವಿಚಾರವಾಗಿ ಕಾಮಗಾರಿ ನಿಂತಿರಬಹುದೇ ಎಂದು ಸಾರ್ವಜನಿಕ ವಲಯದಲ್ಲಿ ಸುದ್ದಿ ಇದೆ. ಕೋಟಿ ಕೋಟಿ ಕಾಮಗಾರಿ ಬಗ್ಗೆ ಬ್ಯಾನರ್ ಹಾಕುವ ಶಾಸಕರ ಕಾಮಗಾರಿ ಎಲ್ಲಿ ನಡೆಯುತ್ತಿದೆ ಎಂದು ತಿಳಿಯುತ್ತಿಲ್ಲ. ಅಪಾಯದ ಅಂಚಿನಲ್ಲಿರುವ ಕೂಳೂರು ಸೇತುವೆ ನಿರ್ಮಾಣಕ್ಕೆ ಇವರಿಗೆ ಆಸಕ್ತಿ ಇಲ್ಲದಿರುವುದು ವಿಪರ್ಯಾಸ ಎಂದು ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಗುತ್ತಿಗೆದಾರರ ಜತೆಗಿನ ವಿವಾದದ ಕಾರಣದಿಂದಾಗಿ ಕಾಮಗಾರಿ ಸ್ಥಗಿತವಾಗಿದೆ. ಎರಡು ಸೇತುವೆಗಳ ಮಧ್ಯೆ 6 ಪಥದ ಸೇತುವೆ ನಿರ್ಮಾಣ ಎಂದು ಪೂರ್ಣವಾಗುವುದೋ ಗೊತ್ತಿಲ್ಲ. 57 ಕೋಟಿ ರೂಪಾಯಿ ವೆಚ್ಚದ ಯೋಜನೆ ಈಗ 70 ಕೋಟಿ ರೂ.ಗೆ ತಲುಪಿದೆ. 18 ತಿಂಗಳಲ್ಲಿ ಪೂರ್ಣ ಗೊಳಿಸುವ ಗುರಿ ಹೊಂದಲಾಗಿತ್ತು. ಹೆದ್ದಾರಿ ಸಚಿವ ನಿತಿನ್ ಗಡ್ಕರಿ 2020ರಲ್ಲಿ ಇದಕ್ಕೆ ಶಿಲಾನ್ಯಾಸವನ್ನೂ ಮಾಡಿ, 2021 ರಲ್ಲಿ ಕೆಲಸ ಆರಂಭವಾಗಿತ್ತು. 2020 ರಲ್ಲಿ ಸೇತುವೆಯನ್ನು ಮುಚ್ಚಿ ದುರಸ್ತಿ ಮಾಡಲಾಗಿತ್ತು. ಆದರೂ ಹೊಸ ಸೇತುವೆ ಕಾಮಗಾರಿ ಆಗಿಲ್ಲ. ಸ್ಥಳೀಯ ಜನತೆ ದೊಡ್ಡ ಮಟ್ಟದ ಹೋರಾಟಕ್ಕೆ ವೇದಿಕೆಯನ್ನು ಸಜ್ಜುಗೊಳಿಸುತ್ತಿದ್ದಾರೆ. ಅದಕ್ಕೂ ಮುನ್ನ ಶಾಸಕ ಭರತ್ ಶೆಟ್ಟಿ, ಸಂಸದ ನಳಿನ್ ಕುಮಾರ್ ಕಟೀಲು ಎಚ್ಚೆತ್ತುಕೊಳ್ಳುವುದು ಒಳಿತು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

42 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

60 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

1 hour ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago