News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಚಾರ್ಮಾಡಿಯಲ್ಲಿ ಕಾರು ಅಪಘಾತ, ಮಹಿಳೆ ಸಾವು

Uttar Pradesh: Three killed as truck rams into dhaba
Photo Credit : News Kannada

ಮಂಗಳೂರು: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿ ಘಾಟಿಯಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಕಂದಕಕ್ಕೆ ಉರುಳಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಉಜಿರೆ ನಿವಾಸಿ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಕೊಪ್ಪದಲ್ಲಿ ನಿಧನರಾಗಿದ್ದ ತಮ್ಮ ಸಂಬಂಧಿಕರ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುಗುತ್ತಿರುವಾಗ ಕಾರು ಅಪಘಾತಕ್ಕೀಡಾಗಿದೆ.

ಮೊಮ್ಮಕ್ಕಳಾದ ಸಮೃದ್ಧ್ (13) ಹಾಗೂ ಸಾಕ್ಷಿ (11) ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ (55) ಅವರ ತಲೆಗೆ ಗಂಭೀರ ಗಾಯವಾಗಿದೆ. ಚಾಲಕ ಸುರ್ಯ ರಸ್ತೆಯ ಅರುಣ್ ಗಾಯಗೊಂಡಿದ್ದಾರೆ. ಈ ಪೈಕಿ ಸಂಬಂಧಿಕರಾದ ಸರೋಜಿನಿ ಶೆಟ್ಟಿ (55) ಅವರು ತೀರ್ವ ಗಾಯಗೊಂಡು ಅಸ್ವಸ್ಥರಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದರೂ ಮೃತಪಟ್ಟರಿವುದಾಗಿ ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು