News Karnataka Kannada
Tuesday, April 23 2024
Cricket
ಮಂಗಳೂರು

ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡಲ್ಲ – ಬಿ.ಕೆ. ಹರಿಪ್ರಸಾದ್‌

Mangaluru: Won't beg for ministerial berth: B.K. Hariprasad
Photo Credit : News Kannada

ಮಂಗಳೂರು: ಸಚಿವ ಸ್ಥಾನ ಕೈತಪ್ಪಿರುವ ಹಿರಿಯ ಕಾಂಗ್ರೆಸ್‌ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ್ದಾರೆ. ಸಚಿವ ಸ್ಥಾನಕ್ಕಾಗಿ ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ ಎಂದು ಹೇಳಿದ್ದಾರೆ.

ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆ ನಡೆದಿತ್ತು. ಅದರಲ್ಲಿ ಮಾತನಾಡಿದ ಅವರು ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ, ಎದೆ ಕೊಟ್ಟು ನಿಲ್ಲುತ್ತೇನೆ. ನಾನು ಮಂತ್ರಿ ಆಗೋದು ಬಿಡೋದು ಬೇರೆ ಪ್ರಶ್ನೆ. ಐವರನ್ನು ಸಿಎಂ ಆಯ್ಕೆ ಮಾಡುವುದರಲ್ಲಿ ನಾನು ಪಾತ್ರವಹಿಸಿದ್ದೇನೆ, ಸಮುದಾಯಕ್ಕೆ ನೀವೇನು ಕೊಟ್ಟಿದ್ದೀರಿ ಎಂದು ಬಹಿರಂಗವಾಗಿಯೇ ಸಿಎಂ ಸಿದ್ದರಾಮಯ್ಯ ಹೆಸರು ಹೇಳಿ ತಮ್ಮ ಅಸಮಾಧಾನ, ಆಕ್ರೋಶ, ಸಿಟ್ಟನ್ನು ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ರಾಜಕೀಯವಾಗಿ ಈ ಸಮುದಾಯದವರು ಮುಂದೆ ಬರುತ್ತಿಲ್ಲ. ಏನೇ ಪ್ರಯತ್ನ ಮಾಡಿದರೂ ಆಗುತ್ತಿಲ್ಲ. ಅವಕಾಶ ವಂಚಿತರಾಗುತ್ತಿರುವುದು ನೋಡಿದರೆ ಯಾರದ್ದೋ ಷಡ್ಯಂತ್ರಕ್ಕೆ ಬಲಿಯಾಗುತ್ತಿದ್ದೇವೆ ಅನಿಸುತ್ತದೆ. ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಕ್ಕೆ ಸೇರಿದವರು. ಎಲ್ಲರ ಒಟ್ಟಿಗೆ ಸೇರಬೇಕು ಎಂದು ನಾವು 2013 ರಲ್ಲಿ ಬೆಂಬಲ ಅವರಿಗೆ ಬೆಂಬಲ ಕೊಟ್ಟು ಮುಖ್ಯಮಂತ್ರಿಯಾದರು. ಆ ಬಳಿಕ ನಾವು ಕಾಂಗ್ರೆಸ್ ಆಗಲಿ, ಮಂತ್ರಿಗಳಾಗಲಿ ಯಾರ ಬಳಿಯೂ ಕೈ ಚಾಚುವುದಿಲ್ಲ. ಹಿಂದುಳಿದ ವರ್ಗಕ್ಕೆ ಯಾವ ರೀತಿ ಅನುಕೂಲ ಮಾಡಬೇಕು ಎಂದ ಯೋಚನೆ ಮಾಡುತ್ತೇವೆ. ಸ್ವಾರ್ಥಕ್ಕೆ ಯಾವುದು ಕೇಳಲ್ಲ ಎಂದು ಕಿಡಿಕಾರಿದ್ದಾರೆ.

ಕೋಟಿ ಚನ್ನಯ್ಯ ಪಾರ್ಕ್‌ ಗೆ ಹಣ ಕೊಟ್ಟಿಲ್ಲ: ಉಡುಪಿ ಜಿಲ್ಲೆಯ ಕಾರ್ಕಳ ಕೋಟಿ ಚನ್ನಯ್ಯ ಪಾರ್ಕ್ ಗೆ 5 ಕೋಟಿ ಕೊಡಿ ಎಂದು ಕೇಳಿದ್ದೆವು. ಸಿದ್ದರಾಮಯ್ಯ ಕೊಡುತ್ತೇವೆ ಎಂದು ಹೇಳಿದವರು ಇದುವರೆಗೆ ಕೊಟ್ಟಿಲ್ಲ. ನನಗೆ ಅವರು ರಾಜಕೀಯವಾಗಿ ಏನು ಸಹಾಯ ಮಾಡಲು ಆಗಲ್ಲ. ನಾನೇ ಅವರಿಗೆ ಸಹಾಯ ಮಾಡುತ್ತೇನೆ. ಮಂಗಳೂರು ವಿವಿಯಲ್ಲಿ ಗುರುಪೀಠ ಸ್ಥಾಪನೆಗೆ ನಾನು ಎಂಪಿ ಆದಾಗ ಹಣ ಕೊಟ್ಟಿದೆ. ಕಟ್ಟಡ ಅರ್ಧಕ್ಕೆ ನಿಂತಿದೆ ಹಣ ಕೊಟ್ಟಿಲ್ಲ, ಆದರೆ ಅವರ ಸಮಾಜಕ್ಕೆ ಎಷ್ಟು ಕೊಟ್ಟಿದ್ದಾರೆ ಎಂದು ಸ್ವಾಮೀಜಿಗಳು ನೋಡಲಿ. ಹಿಂದುಳಿದ ವರ್ಗ ಎಂದರೆ ಒಂದು ಜಾತಿ‌ ಮಾತ್ರವಲ್ಲ. ಜಾತಿ ಬೇರೆ, ವರ್ಗ ಬೇರೆ, ನಾವು ವರ್ಗದಲ್ಲಿ ಬರುತ್ತೇವೆ. ವರ್ಗದಲ್ಲಿ ಬರುವ ಎಲ್ಲರಿಗೂ ಸಮಾನ ಹಕ್ಕು ಪಡೆಯಬೇಕು. 11 ಕ್ಷೇತ್ರಗಳಲ್ಲಿ ಈಡಿಗ, ಬಿಲ್ಲವ, ದೀವರು ನಿರ್ಣಯಕವಾಗಿದ್ದೇವೆ. ನಾನು ಸಹ ಎಲೆಕ್ಷನ್ ಕಮಿಟಿಯಲ್ಲಿ ಇದ್ದೆ, ನಾಲ್ಕು ಜನ ಟಿಕೆಟ್ ವಂಚಿತರಾದರು. 2 ಬಿಲ್ಲವ, 1 ಈಡಿಗ, 1 ದೀವರು ಟಿಕೆಟ್ ಗಿಟ್ಟಿಸಿಕೊಳ್ಳಲಿಲ್ಲ.

ಅಲ್ಪಸಂಖ್ಯಾತರನ್ನು‌ ಮುಂದಿಟ್ಟು ನಮಗೆ ಟಿಕೆಟ್ ವಂಚಿಸಿದರು: ಮಂಗಳೂರು ಉತ್ತರ ಮತ್ತು ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಕೊಟ್ಟಿದ್ದಾರೆ. ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ನೀವು ಮುಂದೆ ಬರಬೇಕಾದರೆ ಅಲ್ಪಸಂಖ್ಯಾತರ ವಿರುದ್ಧ ಧ್ವನಿ ಎತ್ತಬಾರದು. ಅಲ್ಪಸಂಖ್ಯಾತರನ್ನು‌ ಮುಂದಿಟ್ಟು ನಮಗೆ ಟಿಕೆಟ್ ವಂಚಿತರನ್ನಾಗಿ ಮಾಡುತ್ತಾರೆ. ಲಿಂಗಾಯತರು, ಒಕ್ಕಲಿಗರು, ಬ್ರಾಹ್ಮಣರು, ಕುರುಬರು ಸಿಎಂ ಸ್ಥಾನಕ್ಕೆ ಹೋರಾಟ ಮಾಡ್ತಾರೆ. ಅವರು ಅಧಿಕಾರಕ್ಕೆ ಬರಬೇಕಾದರೆ ಅವರ ಸ್ಥಾನಗಳನ್ನು ಬಿಟ್ಟುಕೊಡಲಿ. ನಮ್ಮನ್ನು ಯಾಕೆ ಕಟ್ ಮಾಡ್ತಾರೆ, ನಾವು ಹೆಚ್ಚು ಇರುವ ಜಾಗದಲ್ಲಿ ಅವಕಾಶ ಕೊಡಬೇಕು. ನಾವೇನು ಮಂಡ್ಯ, ಬೆಳಗಾವಿಯಲ್ಲಿ ಕೊಡಿ ಎಂದು ಕೇಳಲ್ಲ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡುಗು ಕಡೆ ನಮ್ಮವರು ನಿರ್ಣಾಯಕ ಎಂದು ರಾಜಕೀಯದ ಕಟು ವಾಸ್ತವವನ್ನು ಬಿ ಕೆ ಹರಿಪ್ರಸಾದ್ ಸಭೆಯಲ್ಲಿ ಎಲ್ಲರ ಮುಂದಿಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು