ಮಂಗಳೂರು: ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾಗಿದ್ದಾರೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು ( 58)ಮೃತ ಕಲಾವಿದ.
ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ನಿನ್ನೆ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿದ್ದು ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುಪಪ್ಪ ಬಾಯರು ರಂಗಸ್ಥಳದಲ್ಲೇ ಇದ್ದರು,ಇನ್ನೋಂದು ಪಾತ್ರಧಾರಿ ಯಕ್ಷಗಾನದ ರಂಗಸ್ಥಳದಲ್ಲಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ ಹೃದಾಯಾಘಾತವಾಗಿ ರಂಗಸ್ಥಳದಿಂದ ಕೆಳಗೆ ಕುಸಿದು ಬಿದ್ದಿದ್ದರು.ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಅಸ್ಪತ್ರೆಗೆ ಕೊಡ್ಯೊಯ್ದರೂ ಚಿಕಿತ್ಸೆ ಫಲಕಾರಿ ಆಗದೆ ನಿಧನರಾಗಿದ್ದಾರೆ.
ತ್ರಿಜನ್ಮ ಮೋಕ್ಷ ಯಕ್ಷಗಾನ ಪ್ರದರ್ಶನದಲ್ಲೇ ಶಿಶುಪಾಲನಾಗಿದ್ದ ಗುರುವಪ್ಪ ಬಾಯಾರು ಮೋಕ್ಷ ಪಡೆದಿದ್ದಾರೆ.