ಮಂಗಳೂರು: ತೆಂಕುತಿಟ್ಟು ಯಕ್ಷಗಾನದಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದ ಭಾಗವತ ಕೀರ್ತನ್ ಶೆಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖ್ಯಾತ ಯಕ್ಷಗಾನ ಕಲಾವಿದ ಕೀರ್ತನ್ ಶೆಟ್ಟಿ ವಗೆನಾಡು ಅವರು ನವೆಂಬರ್ 18ರ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಬಪ್ಪನಾಡು ಮತ್ತು ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೋವಿಡ್ ನಂತರ ಚಿಕ್ಕಮೇಳದಲ್ಲಿ ಸೇವೆ ಸಲ್ಲಿಸಿದ್ದರು. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆಯೇ ಕಾರಣ ಎಂದು ತಿಳಿದುಬಂದಿದೆ.
ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.