News Karnataka Kannada
Saturday, April 27 2024
ಮಂಗಳೂರು

ಮಂಗಳೂರು: ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ, ಚಿಕಿತ್ಸೆ ಫಲಕಾರಿಯಾಗದೆ ಸಾವು

Youth attacked with deadly weapons
Photo Credit : News Kannada

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ವೇಳೆ ಮತ್ತೆ ರಕ್ತ ಚಿಮ್ಮಿದ್ದು ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಯುವಕನೊಬ್ಬನ ಮೇಲೆ ಮಾರಕಸ್ತ್ರಗಳಿಂದ ದಾಳಿ ಮಾಡಲಾಗಿದೆ.

ಮಂಗಳಪೇಟೆಯ ವಾಝಿ ಎಂಬ ಯುವಕನ ಮೇಲೆ ತಲವಾರಿನಿಂದ ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ ವಾಝಿ ಮೇಲೆ ಅಂಗಡಿಯ ಎದುರಿನ ಜಗಲಿಯಲ್ಲಿಯೇ ದುಷ್ಕರ್ಮಿಗಳು ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವವಾಗಿ ಗಂಭೀರ ಸ್ಥಿತಿಯಲ್ಲಿರುವ ವಾಝಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು