Categories: ಮಂಗಳೂರು

ತನ್ನದ್ದಲ್ಲದ ತಪ್ಪಿಗೆ ಹೊರದೇಶದಲ್ಲಿ ಬಂಧಿಯಾದ ಮಂಗಳೂರು ಯುವಕ: ನ್ಯಾಯಕ್ಕಾಗಿ ಡಿಸಿಗೆ ಮನವಿ

 ಮಂಗಳೂರು: ಜೀವನದಲ್ಲಿ ಸ್ವಾಭಿಮಾನಿಯಾಗಿ ಬದುಕು ಕಟ್ಟಿಕೊಳ್ಳುವ ಕನಸಿನೊಂದಿಗೆ ಹಲವು ಯವಕರು ವಿದೇಶ ಪ್ರಯಾಣ ಮಾಡುತ್ತಾರೆ. ಆದರೆ ಅಲ್ಲಿ ಅನುಭವಿಸುವ ನೋವು ಅಪಾರ… ಹೌದು, ಇಲ್ಲೊಬ್ಬ ಯುವಕ ತನ್ನದಲ್ಲದ ತಪ್ಪಿಗೆ ಜೈಲಿನಲ್ಲಿ ಬಂಧಿಯಾಗಿ ಶಿಕ್ಷೆ ಅನುಭವಿಸುತ್ತಿದ್ದಾನೆ.

ಕಡಬ ತಾಲೂಕಿನ ಊತ್ತೂರು ಗ್ರಾಮದ ಮುಜೂರು ದಿ. ಕೆಂಚಪ್ಪ ಗೌಡ ಹಾಗು ಹೇಮಾವತಿ ದಂಪತಿಯ ಪುತ್ರ ಚಂದ್ರಶೇಖರ್ ಎಮ್. ಕೆ ಇವರು, ರಿಯಾದ್ ನಲ್ಲಿರುವ(ಸೌದಿ ಅರೇಬಿಯಾ) ಅಲ್ಪಾನರ್ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಆದರೆ ಯಾವುದೋ ಹ್ತಾಕರ್ ಗಳ ಸುಳಿಗೆ ಸಿಲುಕಿ ನಿರಪರಾದಿಯಾಗಿ 2022ರ ನವೆಂಬರ್ ನಿಂದ ಬಂಧಿತರಾಗಿ ಜೈಲಿನಲ್ಲಿ ದಿನ ಕಳೆಯುವಂತೆ ಆಗಿದೆ.

ಚಂದ್ರಶೇಖರ್ ಕಳೆದ ವರ್ಷ ಮೊಬೈಲ್ ಮತ್ತು ಸಿಮ್ ಖರೀದಿಗಾಗಿ ರಿಯಾದ್‍ನಲ್ಲಿರುವ ಮೊಬೈಲ್ ಅಂಗಡಿಯೊಂದಕ್ಕೆ ಸಿಮ್ ಖರೀದಿಸಲು ತೆರಳಿದ್ದಾರೆ. ಈ ಸಂದರ್ಭದಲ್ಲಿ ಚಂದ್ರಶೇಖರ್ ಅವರಿಂಧ 2ಬಾರಿ ತಂಬನ್ನು ಪಡೆಯಲಾಗಿದೆ. ಒಂದು ವಾರದ ಬಳಿಕ ಆ ದೂರವಾಣಿ ಸಂಖ್ಯೆಗೆ ಅರೆಬೀಕ್ ಭಾಷೆಯಲ್ಲಿನ ಸಂದೇಶವೊಂದು ಬರುತ್ತದೆ.

ಈ ಸಂದೇಶವನ್ನು ಕ್ಲಿಕ್ ಮಾಡಿದ ಚಂದ್ರಶೇಖರ್ ಬಳಿ ಸಿಮ್ ಬಗ್ಗೆಗಿನ ಮಾಹಿತಿ ಹಾಗೂ ಓಟಿಪಿ ಯನ್ನು ಕೇಳುತ್ತಾರೆ. ಓಟಿಪಿ ಹೇಳಿದ ಚಂದ್ರಶೇಖರ್ ಬಳಿಕ ತಮ್ಮ ಕೆಲಸಕ್ಕೆ ತೆರಳಿದ್ದಾರೆ. ಇದರ ಜತೆ ತಮ್ಮ ನಿಶ್ಚಿತಾರ್ಥ ಮತ್ತಿತ್ತರ ಕೆಲಸದಲ್ಲಿ ಮಗ್ನರಾರುತ್ತಾರೆ. ಈಗಿರುವಾಗ ಒಂದು ದಿನ ಇದ್ದಕ್ಕಿದಂತೆ ಯಾವುದೇ ಮಾಹಿತಿಯನ್ನು ನೀಡದೆ ಪೊಲೀಸ್ ಅಧೀಕ್ಷರೊಬ್ಬರು ಆದೇಶದ ಮೇರೆಗೆ ಚಂದ್ರಶೇಖರ್ ಅವರನ್ನು ಬಂಧಿಸುತ್ತಾರೆ.

ಇದ್ದಕ್ಕಿದ್ದಂತೆ ಈ ಘಟನೆ ಮನೆಯವರಿಗೆ ಬರಸಿಡಿಲು ಬಡಿದಂತಾಗುತ್ತದೆ.

ರಿಯಾದ್ ದೇಶದ ಚಂದ್ರಶೇಖರ್ ಅವರಿಗೆ ತಿಳಿಯದಂತೆ ಅಲ್ಲಿ ಬ್ಯಾಂಕ್ ವೊಂದರಲ್ಲಿ ಅಕೌಂಟ್ ತೆರೆದಿದ್ದು, ಮತ್ತು ದೇಶದ ಮಹಿಳೆಯೊಬ್ಬರ 22 ಸಾವಿರ ಈ ಖಾತೆಗೆ ಜಮೆಯಾಗಿ ಕೂಡಲೇ ಅದರಿಂದ ಬೇರೆ ಯಾವುದೋ ದೇಶಕ್ಕೆ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್ ರವರ ಖಾತೆಗೆ ಜಮೆಯಾಗಿರುವುದನ್ನು ಗಮನಿಸಿ ಚಂದ್ರಶೇಖರ್ ಅವರ ಮೇಲೆ ದೂರನ್ನು ನೀಡಿದ್ದಾರೆ. ಹೀಗಾಗಿ ಅವರು ಪೊಲೀಸರು ಜೈಲಿಗಟ್ಟಿದ್ದಾರೆ. ಈ ವಿಚಾರ ರಿಯಾದ್ ದೇಶದಲ್ಲಿದ್ದ ಚಂದ್ರಶೇಖರ್ ಅವರ ಸ್ನೇಹಿತರಿಂದ ತಿಳಿದು ಬಂದಿದೆ ಎಂದು ಚಂದ್ರಶೇಖರ್ ಅವರ ಪೋಷಕರು ಅಳಲು ತೋಡಿಕೊಂಡಿದ್ದಾರೆ.

ಹ್ಯಾಕರ್ ಗಳ ಕಿರುಕುಳದಿಂದ ಚಂದ್ರಶೇಖರ್ ಅವರು ಜೈಲಿನಲ್ಲಿ ಬಂಧಿಯಾಗಿದ್ದಾರೆ. ಮಗನ ಆಗಮನಕ್ಕಾಗಿ ತಾಯಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅಲ್ಲದೆ ಮಗನನ್ನು ಬಿಡಿಸಿಕೊಳ್ಳಲು ಕಳೆದ 8 ತಿಂಗಳಿಂದ ಒದ್ದಾಡುತ್ತಿದ್ದಾರೆ. ಇತ್ತ ಚಂದ್ರಶೇಖರ್ ದುಡಿಯುತ್ತಿದ್ದ ರಿಯಾದ್ ಕಂಪನಿಯೂ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದೆ ಅನ್ಯಾಯ ಮಾಡಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನು ಮಗನನ್ನು ಜೈಲಿನಿಂದ ಬಿಡಿಸಿ ನ್ಯಾಯ ಒದಗಿಸಿ ಕೊಡಲು, ಪ್ರಧಾನ ಮಂತ್ರಿ ಹಾಗು ವಿದೇಶಾಂಗ ಸಚಿವ ಶ್ರೀ ಚಂದ್ರಶೇಖರ್ ಅವರಿಗೆ ಪತ್ರ ಬೆರೆಯುವಂತೆ ಆಗ್ರಹಿಸಿ ಮಂಗಳೂರು ಜಿಲ್ಲಾಧಿಕಾರಿ ಅವರಿಗೆ ಚಂದ್ರಶೇಖರ್ ಅವರ ಕುಟುಂಬ ಹಾಗು ಎಂಡೋ ವಿರೋಧಿ ಹೋರಾಟ ಸಮಿತಿ ಕೊಕ್ಕಡ ಇದರ ಅಧ್ಯಕ್ಷರಾದ ಶ್ರೀಧರ್ ಗೌಡ ಕೆ ಮನವಿ ಮಾಡಿದ್ದಾರೆ.

Ashitha S

Recent Posts

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

9 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

10 mins ago

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

34 mins ago

ಬೀದಿಗಳಲ್ಲಿ ಹಸುಗಳ ಕಾದಾಟ: ಬಾಲಕಿಯರ ಮೇಲೆ ಬಿದ್ದ ಹಸು, ವಿಡಿಯೋ ವೈರಲ್

ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆಯೊಂದು ಸೆರೆಯಾಗಿದ್ದು ಬೀದಿಯಲ್ಲಿ ಬಾಲಕಿಯರ ಗುಂಪಿನ ಮೇಲೆ ಎರಡು ಹಸುಗಳು ಬಿದ್ದು ಉರುಳಾಡುವುದು ವೀಕ್ಷಕರನ್ನು ಬೆಚ್ಚಿ ಬೀಳಿಸಿದೆ,…

36 mins ago

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

59 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

1 hour ago