ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಇಚ್ಲಂಪಾಡಿಯ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದೆ. ಸಂದೇಶ್ (25) ಮೃತ ದುರ್ದೈವಿ.
ಈತ ಬೆಂದೂರ್ ವೆಲ್ ನ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸ್ಕೂಟರ್ ನಲ್ಲಿ ರೂಮ್ ಗೆ ತೆರಳುತ್ತಿದ್ದ ವೇಳೆ ಪಂಪ್ ವೆಲ್ ನಲ್ಲಿ ಅಪಘಾತ ಸಂಭವಿಸಿದೆ.ಗಂಭೀರ ಗಾಯಗೊಂಡಿದ್ದ ಸಂದೇಶ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಇಬ್ಬರು ಸಹೋದರರನ್ನು ಅಗಲಿದ್ದಾರೆ.